ಆರ್ಥಿಕ
ಜುಲೈ 10 ರಂದು ಅನ್ನ ಭಾಗ್ಯ ಯೋಜನೆಗೆ ಚಾಲನೆ

Views: 0
ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿಯಾಗಿ ಅಕ್ಕಿಯ ಬದಲಾಗಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಯೋಜನೆ, ಜುಲೈ 10 ರಂದು ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಸಚಿವ ಕೆ ಎಚ್ ಮುನಿಯಪ್ಪ ಮಾಹಿತಿ ನೀಡಿದರು.
ಸಚಿವರು ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜುಲೈ 10 ರಂದು ಸಂಜೆ 5:00 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮೆಯಾಗಲಿದೆ.
ರಾಜ್ಯದಲ್ಲಿ ನಾಲ್ಕು ಸದಸ್ಯರನ್ನು ಒಳಗೊಂಡ 1.29 ಕೋಟಿ ಬಿಪಿಎಲ್ ಕಾರ್ಡ್ ಕುಟುಂಬಗಳಿದ್ದು, ಒಟ್ಟು 41 ಕೋಟಿ ಫಲಾನುಭವಿಗಳಿದ್ದಾರೆ ಎಂದು ತಿಳಿಸಿದ್ದಾರೆ.