ಕರಾವಳಿ
ಜುಲೈ. 7 ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Views: 2
ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಆಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಜುಲೈ.7 ರಂದು ಶಾಲಾ ಕಾಲೇಜಿಗೆ ರಜೆಯನ್ನು ಮುಂದುವರಿಸಲಾಗಿದೆ.
ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ತಿಳಿಸಿದ್ದಾರೆ.