ಜೂನ್ 28ಕ್ಕೆ ಮರವಂತೆ ನೇತಾಜಿ ಸುಭಾಶ್ಚಂದ್ರ ಬೋಸ್ ಸರಕಾರಿ ಪ್ರೌಢಶಾಲೆಯಲ್ಲಿ ‘ಮಕ್ಕಳಿಗಾಗಿ ಕಾರಂತರು’

Views: 185
ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲಾ ಡಾ. ಶಿವರಾಮ ಕಾರಂತ ಟ್ರಸ್ಟ್ ಮರವಂತೆಯ ನೇತಾಜಿ ಸುಭಾಶ್ಚಂದ್ರ ಬೋಸ್ ಸರಕಾರಿ ಪ್ರೌಢಶಾಲೆಯ ಸಹಯೋಗದಲ್ಲಿ ಜೂನ್ 28ರ ಬೆಳಗ್ಗೆ 10:30ಕ್ಕೆ ‘ಮಕ್ಕಳಿಗಾಗಿ ಕಾರಂತರು’ ಕಾರ್ಯಕ್ರಮ ಆಯೋಜಿಸಿದೆ.
ಶಾಲೆಯ ಐ.ವಸಂತಕುಮಾರಿ ಕಲಾಂಗಣದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಖ್ಯಾತ ರಂಗವಲ್ಲಿ ಕಲಾವಿದೆ ಡಾ.ಭಾರತಿ ಮರವಂತೆ ವಿದ್ಯಾರ್ಥಿಗಳಿಗೆ ರಂಗವಲ್ಲಿಯ ಮೂಲಕ ಕಾರಂತರ ಪರಿಚಯ ಮಾಡಿಕೊಡುವರು.
ಈ ವಿಶಿಷ್ಟ ಕಾರ್ಯಕ್ರಮವನ್ನು ಶಾಲಾ ಸಂಸ್ಥಾಪನಾ ಸಮಿತಿ ಅಧ್ಯಕ್ಷ ಎಸ್. ಜನಾರ್ದನ ಮರವಂತೆ ಉದ್ಘಾಟಿಸಲಿದ್ದು, ಟ್ರಸ್ಟ್ನ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಅಧ್ಯಕ್ಷತೆ ವಹಿಸುವರು. ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ ಪಟಗಾರ್, ಮುಖ್ಯೋಪಾಧ್ಯಾಯ ಎಂ. ಭಾಸ್ಕರ ಮಯ್ಯ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಸುಜಾತಾ, ಶಾಲಾ ರಜತೋತ್ಸವ ಸಮಿತಿ ಅಧ್ಯಕ್ಷ ದಯಾನಂದ ಬಳೆಗಾರ್ ಮುಖ್ಯ ಅತಿಥಿಗಳಾಗಿರುವರು. ಟ್ರಸ್ಟ್ನ ಸದಸ್ಯ ಕಾರ್ಯದರ್ಶಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಉಪಸ್ಥಿತರಿರುವರು ಎಂದು ಟ್ರಸ್ಟ್ ಪ್ರಕಟಿಸಿದೆ.