ರಾಜಕೀಯ

ಜೆಡಿಎಸ್ ಪಕ್ಷದಲ್ಲಿನ ಬೆಳವಣಿಗೆಗಳಿಂದ ಬೇಸತ್ತು ಮರಿತಿಬ್ಬೇಗೌಡ ರಾಜೀನಾಮೆ

Views: 46

ಹುಬ್ಬಳ್ಳಿ,  ಜೆಡಿಎಸ್‌ನ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ನಗರದಲ್ಲಿಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರ ನಿವಾಸಕ್ಕೆ ತೆರಳಿ ಅವರು ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು.

ಜೆಡಿಎಸ್ ಪಕ್ಷದಲ್ಲಿನ ಬೆಳವಣಿಗೆಗಳಿಂದ ಬೇಸತ್ತು ಈ ನಿರ್ಧಾರಕ್ಕೆ ಬಂದಿರುವುದಾಗಿ ಸುದ್ದಿಗಾರರಿಗೆ ತಿಳಿಸಿದ ಅವರು, ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ.

ಕುಟುಂಬ ರಾಜಕಾರಣ ಬೇಸರ ತಂದಿದೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಅಭ್ಯರ್ಥಿಯಾಗಿಸುವುದು ಬೇಡ, ಮಂಡ್ಯದಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ನೀಡುವಂತೆ ಹೇಳಿದ್ದೆ. ಇದು ನಮ್ಮ ನಾಯಕರಿಗೆ ಇಷ್ಟವಾಗಲಿಲ್ಲ,ನನ್ನನ್ನು ಸಂಶಯದ ದೃಷ್ಟಿಯಿಂದ ನೋಡುತ್ತಿದ್ದರಲ್ಲದೇ ಪಕ್ಷದ ಸಂಘಟನೆಗೂ ಪರಿಗಣಿಸಲಿಲ್ಲ ಎಂದು ಅವರು ತಿಳಿಸಿದರು.

ನಮ್ಮ ನಾಯಕರು ಮೊಸಳೆ ಸವಾರಿ ಮಾಡುತ್ತಿದ್ದಾರೆ, ಇದು ಬಹಳಷ್ಟು ಅಪಾಯಕಾರಿ ಎಂಬುದು ಎಲ್ಲರಿಗೂ ಗೊತ್ತು ಎಂದು ಹೇಳುವ ಮೂಲಕ ಪರೋಕ್ಷವಾಗಿ ಅವರು ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು ಕೆಲವೇ ದಿನಗಳಲ್ಲಿ ತಮ್ಮ ರಾಜಕೀಯ ನಿರ್ಧಾರ ತಿಳಿಸುವುದಾಗಿ ಅವರು ಹೇಳಿದರು.

Related Articles

Back to top button