ರಾಜಕೀಯ
ಜೆಡಿಎಸ್ 3 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ; ಮಂಡ್ಯದಿಂದ ಕುಮಾರಸ್ವಾಮಿ ಕಣಕ್ಕೆ..!

Views: 77
ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೋಲಿಸಲು ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಬಿಜೆಪಿ ಈಗಾಗಲೇ ಬಹುತೇಕ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಇದೀಗ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಕೋಲಾರ, ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ನಿರೀಕ್ಷೆಯಂತೆ ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ, ಕೋಲಾರದಿಂದ ಮಲ್ಲೇಶ್ ಬಾಬು ಕಣಕ್ಕಿಳಿಯಲಿದ್ದಾರೆ. ಜತೆಗೆ ಬಹುನಿರೀಕ್ಷಿತ ಮಂಡ್ಯ ಕ್ಷೇತ್ರದಿಂದ ಎಚ್.ಡಿ ಕುಮಾರಸ್ವಾಮಿ ಅವರೇ ಸ್ಪರ್ಧೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.