ಇತರೆ

ಜೆಸಿಬಿ ಡಿಕ್ಕಿ: ವಿದ್ಯುತ್ ಕಂಬ ತುಂಡಾಗಿ ಬಿದ್ದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವು

Views: 115

ಕನ್ನಡ ಕರಾವಳಿ ಸುದ್ದಿ: ವಿದ್ಯುತ್ ಕಂಬಕ್ಕೆ ಜೆಸಿಬಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ತುಂಡಾಗಿ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೈಯ್ಯಪ್ಪನಹಳ್ಳಿಯ ಸುದ್ದುಗುಂಟೆಪಾಳ್ಯದಲ್ಲಿ ನಡೆದಿದೆ.

ಸುಮತಿ (35) ಹಾಗೂ ಸೋನಿ ಕುಮಾರಿ (35) ಮೃತ ಮಹಿಳೆಯರು. ಇಬ್ಬರೂ ಸುದ್ದುಗುಂಟೆಪಾಳ್ಯದವರು. ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯರ ಮೇಲೆ ವಿದ್ಯುತ್ ಕಂಬ ತುಂಡಾಗಿ ಬಿದ್ದು ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧ ಜೆಸಿಬಿ ಚಾಲಕನನ್ನು ಬಂಧಿಸಲಾಗಿದೆ.

Related Articles

Back to top button
error: Content is protected !!