ಜೈನಮುನಿ ಬರ್ಬರ ಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಮುಖ್ಯಮಂತ್ರಿ ಆದೇಶ

Views: 0
ಕಾಮ ಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಘಾತ ವ್ಯಕ್ತಪಡಿಸಿದ್ದು, ,ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಪ್ಪು ಯಾರೇ ಮಾಡಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಕಾನೂನು ಬಾಹಿರ ಕೃತ್ಯ ಎಸಗುವವರ ವಿರುದ್ಧ ನಿರ್ಧಾಕ್ಷಣ್ಯ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಎಂದು ಹೇಳಿದರು.
ಇನ್ನುಳಿದ ಆರೋಪಿಗಳನ್ನ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಆರೋಪಿಗಳು ಕಾನೂನಿಂದ ತಪ್ಪಿಸಿಕೊಳ್ಳಬಾರದೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.
ಬಂಧಿತ ಆರೋಪಿ ನಾರಾಯಣ ಮಾಳಿ ಜೈನಮುನಿ ಆಶ್ರಮದ ಬಳಿ ಜಮೀನು ಲೀಸ್ ಪಡೆದು ಉಳಿಮೆ ಮಾಡುತ್ತಿದ್ದನು. ಜೈನ ಮುನಿಗೆ ಅಪ್ತನಾಗಿ ಆಶ್ರಮದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಮುನಿಗಳ ವಿಶ್ವಾಸ ಗಳಿಸಿದ್ದನು. ವೈಯಕ್ತಿಕ ಕಾರಣ ಜೈನ ಮುನಿಗಳಿಂದ ಮಾಳಿ 6 ಲಕ್ಷ ರೂಪಾಯಿ ಹಣ ಪಡೆದಿದ್ದನು. ಸಾಲ ವಾಪಸ್ ಕೇಳಿದ್ದಕ್ಕೆ ಮುನಿಗಳನ್ನು ಕೊಲೆಗೈಯಲಾಗಿದೆ ಎನ್ನಲಾಗುತ್ತಿದೆ.
ಆಶ್ರಮದ ಕೋಣೆಯಲ್ಲಿ ವಿದ್ಯುತ್ ಶಾಕ್ ನೀಡಿ ಕತ್ತು ಹಿಸುಕಿ ಮುನಿಗಳ ಬರ್ಬರ ಹತ್ಯೆ ಮಾಡಿದ್ದು, ಬಳಿಕ ಸ್ನೇಹಿತ ಹುಸೇನ್ ಗೆ ಕರೆ ಮಾಡಿ ಕರೆಸಿಕೊಂಡಿದ್ದನು. ಇಬ್ಬರೂ ಸೇರಿ ಮೃತದೇಹ ಕತ್ತರಿಸಿ ಬಟ್ಟೆ ಸುತ್ತಿ ಕೊಳವೆ ಬಾವಿಗೆ ಎಸೆದಿದ್ದರು.