ಧಾರ್ಮಿಕ
ಜ್ಞಾನವಾಪಿ ಮಸೀದಿಯಲ್ಲಿ ಮೂರ್ತಿಗಳಿಗೆ ಪೂಜೆ ಮಾಡಲು ಅನುಮತಿ!

Views: 107
ಲಕ್ನೋ: ಸರ್ವೆ ವರದಿ ಬಹಿರಂಗವಾದ ಬೆನ್ನಲ್ಲೇ ಹಿಂದೂಗಳಿಗೆ ಜ್ಞಾನವಾಪಿ ಮಸೀದಿಯ ಒಳಗಡೆ ಸಿಕ್ಕ ಮೂರ್ತಿಗಳಿಗೆ ಪೂಜೆ ಮಾಡಲು ವಾರಣಾಸಿ ಕೋರ್ಟ್ ಅನುಮತಿ ನೀಡಿದೆ.
ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಹಿಂದೂಗಳಿಗೆ ಸಿಕ್ಕಿದ ದೊಡ್ಡ ಜಯ ಇದಾಗಿದ್ದು, ಮುಂದಿನ 7 ದಿನಗಳಲ್ಲಿ ಮಸೀದಿಯ ನೆಲ ಮಹಡಿಯಲ್ಲಿ ಸಿಕ್ಕ ವಿಗ್ರಹಗಳಿಗೆ ಪೂಜೆ ಆರಂಭವಾಗಲಿದೆ.
ಹಿಂದೂಗಳ ಪರ ವಕೀಲ ವಿಷ್ಣು ಶಂಕರ್ ಜೈನ್ ಅವರು ಪ್ರತಿಕ್ರಿಯಿಸಿ, ಜ್ಞಾನವಾಪಿ ಪ್ರಕರಣದಲ್ಲಿ ಹಿಂದೂಗಳಿಗೆ ಸಿಕ್ಕಿದ ಮೊದಲ ದೊಡ್ಡ ಗೆಲುವು ಎಂದು ಬಣ್ಣಿಸಿದ ಅವರು ಜ್ಞಾನವಾಪಿ ಮಸೀದಿಯ ಮೊಹರು ಮಾಡಿದ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ 31 ವರ್ಷದ ಬಳಿಕ ಪೂಜೆ ಮಾಡಲು ಅವಕಾಶ ಸಿಕ್ಕಿದೆ ಎಂದು ತಿಳಿಸಿದರು.