ಶಿಕ್ಷಣ

ಜ್ಞಾನಸರಸ್ವತಿ ಪದವಿಪೂರ್ವ ಕಾಲೇಜಿನಲ್ಲಿ ಸಿಇಟಿ, ನೀಟ್, ಜೆಇಇ ಓರಿಯಂಟೇಶನ್ ಕಾರ್ಯಕ್ರಮ

" ಆತ್ಮವಿಶ್ವಾಸವು ವ್ಯಕ್ತಿಯು ತನ್ನ ಗುರಿಗಳನ್ನು ಸಾಧಿಸಲು ಮತ್ತು ಜೀವನದಲ್ಲಿ ಯಶಸ್ವಿಯಾಗಲು ಸಹಾಯ ಮಾಡುವುದಲ್ಲದೆ ಯಶಸ್ಸಿನ ಕೀಲಿಕೈ ಇದ್ದಂತೆ, ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ವಿಯಾಗಲು ಸಹಾಯ ಮಾಡುತ್ತದೆ"----ಜ್ಞಾನಸುಧಾ ಸಮೂಹ ಸಂಸ್ಥೆಗಳ ಡೀನ್-ಅಕಾಡೆಮಿಕ್ಸ್ ಡಾ.ಮಿಥುನ್.ಯು 

Views: 72

ಕನ್ನಡ ಕರಾವಳಿ ಸುದ್ದಿ: ಸಿದ್ಧಾಪುರ ಜ್ಞಾನಸರಸ್ವತಿ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ, ನೀಟ್, ಜೆಇಇ ಪ್ರವೇಶ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ  ಓರಿಯಂಟೇಶನ್ ಕಾರ್ಯಕ್ರಮ ಜುಲೈ 25 ರಂದು ನಡೆಯಿತು. 

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಜ್ಞಾನಸುಧಾ ಸಮೂಹ ಸಂಸ್ಥೆಗಳ ಡೀನ್-ಅಕಾಡೆಮಿಕ್ಸ್ ಡಾ.ಮಿಥುನ್ ಯು ಅವರು ಭಾಗವಹಿಸಿ, ಈ ಸ್ಪರ್ಧಾತ್ಮಕ ಪರೀಕ್ಷೆಗಳ ಮಹತ್ವ, ತಯಾರಿ ವಿಧಾನಗಳು ಹಾಗೂ ವಿದ್ಯಾರ್ಥಿಗಳು ಅನುಸರಿಸಬಹುದಾದ ಅಭ್ಯಾಸ ಕ್ರಮಗಳ ಬಗ್ಗೆ ವಿಶ್ಲೇಷಣೆ ನೀಡಿದರು.

ಅವರು ವಿದ್ಯಾರ್ಥಿಗಳೊಂದಿಗೆ ಮಾತನಾಡುತ್ತಾ, ಆತ್ಮವಿಶ್ವಾಸ ಎಂದರೆ ತನ್ನ ಸಾಮರ್ಥ್ಯಗಳ ಮೇಲೆ ನಂಬಿಕೆ ಇಡುವುದು ಮತ್ತು ಸವಾಲುಗಳನ್ನು ಎದುರಿಸಲು ಸಿದ್ಧರಿರುವುದು. ಇದು ಒಬ್ಬ ವ್ಯಕ್ತಿಯು ತನ್ನ ಬಗ್ಗೆ ಮತ್ತು ತನ್ನ ಸಾಮರ್ಥ್ಯಗಳ ಬಗ್ಗೆ ಹೊಂದಿರುವ ಧನಾತ್ಮಕ ನಂಬಿಕೆಯಾಗಿದೆ.ವ್ಯಕ್ತಿಯು ತನ್ನ ಗುರಿಗಳನ್ನು ಸಾಧಿಸಲು ಮತ್ತು ಜೀವನದಲ್ಲಿ ಯಶಸ್ವಿಯಾಗಲು ಸಹಾಯ ಮಾಡುವುದಲ್ಲದೆ ಯಶಸ್ಸಿನ ಕೀಲಿಕೈ ಇದ್ದಂತೆ, ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ವಿಯಾಗಲು ಸಹಾಯ ಮಾಡುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಮುಖ ಎಜುಕೇಶನ್ ಟ್ರಸ್ಟ್‌‌ನ ಅಧ್ಯಕ್ಷರಾದ ಬಿ ಎಸ್ ಸುರೇಶ್ ಶೆಟ್ಟಿ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಅಮರೇಶ್ ಹೆಗ್ಡೆ ಮತ್ತು ಉಪಪ್ರಾಂಶುಪಾಲ ಹರ್ಷ ಶೆಟ್ಟಿ ಉಪಸ್ಥಿತರಿದ್ದರು.

ರಸಾಯನಶಾಸ್ತ್ರ ಉಪನ್ಯಾಸಕ ಶಂಕರನಾರಾಯಣ ಉಪಾಧ್ಯಾಯ ಕಾರ್ಯಕ್ರಮದ ನಿರೂಪಿಸಿದರು. ಭೌತಶಾಸ್ತ್ರ ವಿಭಾಗದ ಉಪನ್ಯಾಸಕರಾದ ಗಣೇಶ್ ಶೆಟ್ಟಿ ಅವರು ಅತಿಥಿಗಳಿಗೆ ಪುಷ್ಪ ಗುಚ್ಛ ನೀಡಿ ಸ್ವಾಗತಿಸಿದರು. ಉಪಪ್ರಾಂಶುಪಾಲ ಹರ್ಷ ಶೆಟ್ಟಿ ವಂದಿಸಿದರು.

 

Related Articles

Back to top button
error: Content is protected !!