ಟಾಲಿವುಡ್‌ನ ಬ್ಯೂಟಿ ಕ್ವೀನ್ ಕರಾವಳಿಯ ಅನುಷ್ಕಾ ಶೆಟ್ಟಿಗೆ ಟಿಕೆಟ್…! ಸ್ಪರ್ಧೆ ಎಲ್ಲಿ..?

Views: 109
ಕರಾವಳಿಯ ಚೆಲುವೆ, ನಟಿ ಅನುಷ್ಕಾ ಶೆಟ್ಟಿ ರಾಜಕೀಯ ವಲಯದಲ್ಲಿ ಸುದ್ದಿಯಲ್ಲಿದ್ದಾರೆ. ಟಾಲಿವುಡ್‌ನ ಬ್ಯೂಟಿ ಕ್ವೀನ್ ಆಗಿ ಮೆರೆದಿದ್ದ ಅನುಷ್ಕಾ ಶೆಟ್ಟಿಗೆ ಇರುವ ದೊಡ್ಡ ಅಭಿಮಾನಿ ಬಳಗ ಕೂಡಾ ಇಂತಹ ಒಂದು ಚರ್ಚೆ ನಡೆಸ್ತಾ ಇದೆ. ಆಂಧ್ರ ಹಾಗೂ ತೆಲಂಗಾಣದಲ್ಲಿ ಅನುಷ್ಕಾ ಅವರಿಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಹೀಗಾಗಿ ಈ ಬಾರಿ ಅನುಷ್ಕಾ ಶೆಟ್ಟಿ ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಅನ್ನೋ ದೊಡ್ಡ ಚರ್ಚೆ ಆರಂಭವಾಗಿದೆ.
ಲೋಕಸಭೆ ಚುನಾವಣೆಯ ಜೊತೆಯಲ್ಲೇ ಆಂಧ್ರ ವಿಧಾನಸಭೆಗೂ ಚುನಾವಣೆ ನಡೆಯುತ್ತಿರುವುದೇ ಈ ಚರ್ಚೆಗೆ ಕಾರಣವಾಗಿದೆ. ಅನುಷ್ಕಾ ಶೆಟ್ಟಿ ಆಂಧ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು ಅಭಿಮಾನಿಗಳು ಮಾತ್ರವಲ್ಲದೆ, ರಾಜಕೀಯ ವಲಯದಲ್ಲೂ ಚರ್ಚೆ ನಡೆದಿದೆ.
ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷದಿಂದ ಅನುಷ್ಕಾ ಶೆಟ್ಟಿ ಚುನಾವಣಾ ಕಣಕ್ಕೆ ಧುಮುಕಲಿದ್ದಾರೆ ಅನ್ನೋ ಸುದ್ದಿ ಹರಡಿದೆ. ಬಿಜೆಪಿ ಹಾಗೂ ಟಿಡಿಪಿ ಪಕ್ಷದ ಬೆಂಬಲ ಹೊಂದಿರುವ ಜನಸೇನಾ ಪಕ್ಷದ ಪ್ರಮುಖ ನಾಯಕರ ಜೊತೆ ಅನುಷ್ಕಾ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ. ಆದ್ರೆ ಅನುಷ್ಕಾ ಜನಸೇನಾ ಪಕ್ಷಕ್ಕೆ ಸ್ಟಾರ್ ಪ್ರಚಾರಕಿಯಾಗಿ ಹೋಗಲಿದ್ದಾರೆ.