ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ನಳಿನ್ ಕುಮಾರ್ ಕಟೀಲ್‌ಗೆ ಮಹತ್ವದ ಜವಾಬ್ದಾರಿ ನೀಡಿದ ಬಿಜೆಪಿ ಹೈಕಮಾಂಡ್..!

Views: 141
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್‌ಗೆ ಈ ಬಾರಿ ಟಿಕೆಟ್ ಕೈ ತಪ್ಪಿದ್ದು, ಇದರ ಬೆನ್ನಲ್ಲೇ ಮಹತ್ವದ ಜವಾಬ್ದಾರಿಯನ್ನು ಬಿಜೆಪಿ ನಳಿನ್ ಕುಮಾರ್ ಕಟೀಲ್ ಅವರಿಗೆ ನೀಡಿದೆ.
ಬಿಜೆಪಿ ಕಾರ್ಯಕರ್ತನಾಗಿ, ಸಂಸದನಾಗಿ, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪಕ್ಷದಲ್ಲಿ ಸೇವೆ ಸಲ್ಲಿಸಿರುವ ನಳಿನ್ ಕುಮಾರ್ ಕಟೀಲ್‌ಗೆ ಈ ಬಾರಿ ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಕೇರಳದಲ್ಲಿ ಹೇಗಾದರೂ ಮಾಡಿ ಕಮಲ ಅರಳಿಸಬೇಕು ಎನ್ನುವ ಬಹುದೊಡ್ಡ ಜವಾಬ್ದಾರಿಯನ್ನು ಬಿಜೆಪಿ ಹೈಕಮಾಂಡ್ ನಳಿನ್ ಕುಮಾರ್ ಕಟೀಲ್‌ಗೆ ನೀಡಿದೆ.
ಈ ಬಾರಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕು ಎನ್ನುವ ಗುರಿಯಲ್ಲಿದ್ದ ಬಿಜೆಪಿ ಕೇರಳ ಜೊತೆಗೆ ತೆಲಂಗಾಣ ಮತ್ತು ಮಹಾರಾಷ್ಟ್ರ ಲೋಕಸಭಾ ಚುನಾವಣೆಯ ಉಸ್ತುವಾರಿಯನ್ನು ಕರ್ನಾಟಕದ ಬಿಜೆಪಿ ನಾಯಕರುಗಳಿಗೆ ನೀಡಲಾಗಿದೆ.
ಕರ್ನಾಟಕದ ಶಾಸಕ ಅಭಯ್ ಪಾಟೀಲ್‌ಗೆ ತೆಲಂಗಾಣಕ್ಕೆ ಮತ್ತು ಅವಿನಾಶ್ ರೈ ಖನ್ನಾ ಅವರನ್ನು ತ್ರಿಪುರಕ್ಕೆ ಚುನಾವಣಾ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಕರ್ನಾಟಕ ಬಿಜೆಪಿಯ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳದ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಇನ್ನು ನಿರ್ಮಲ್ ಕುಮಾರ್ ಸುರಾನಾ ಅವರನ್ನು ಮಹಾರಾಷ್ಟ್ರ ಬಿಜೆಪಿ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.