ರಾಜಕೀಯ

ಟಿಕೆಟ್ ಮಿಸ್.. ? ಕ್ಷೇತ್ರದಲ್ಲಿ ಗೆಲ್ಲಿಸಿದ್ದಕ್ಕೆ ಜನತೆಗೆ ಧನ್ಯವಾದ ಸಲ್ಲಿಸಿದ ಸದಾನಂದ ಗೌಡ..! 

Views: 59

2 ಬಾರಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಜಿ ಸಿಎಂ ಡಿ.ವಿ ಸದಾನಂದಗೌಡ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಮಿಸ್ ಆಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಕರೆ ಮಾಡಿ ಡಿವಿಎಸ್‌ ಜೊತೆ ಮಾತುಕತೆ ನಡೆಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಘೋಷಣೆಗೂ ಮುನ್ನ ಡಿ.ವಿ ಸದಾನಂದಗೌಡರ ಟೆಕೆಟ್ ಇಲ್ಲ ಅನ್ನೋದನ್ನು ಖುದ್ದು ಅವರೇ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಅಮಿತ್ ಶಾ ಅವರು ಕರೆ ಮಾಡಿ ಮಾತುಕತೆ ನಡೆಸಿದ ಬಳಿಕ ಡಿ.ವಿ ಸದಾನಂದಗೌಡ ಅವರು ತಮಗೆ ಟಿಕೆಟ್ ಮಿಸ್ ಆದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಪಕ್ಷದ ನಿರ್ಧಾರಕ್ಕೆ ನಾನು ಬದ್ಧ ಎಂದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಸದಾನಂದಗೌಡ ಅವರು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮತದಾರರಿಗೆ ವಿಶೇಷ ಧನ್ಯವಾದ ತಿಳಿಸಿದ್ದಾರೆ.

ನನಗೆ ಕಳೆದ ಹತ್ತು ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸ ಮಾಡುವ ಅವಕಾಶವನ್ನು ಮಾಡಿಕೊಟ್ಟು ಆಶೀರ್ವಾದವನ್ನು ಮಾಡಿದ್ದೀರಿ. ನಾನು ನನ್ನ ಶಕ್ತಿ ಮೀರಿ ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ. ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಯಲ್ಲಿ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ನಿಮ್ಮ ಜೊತೆಗೆ ಇನ್ನು ಮುಂದೆಯೂ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸೇರ್ಪಡೆ ಬಗ್ಗೆ ಡಿಕೆಶಿ ಅಚ್ಚರಿ ಹೇಳಿಕೆ ಹಲವು ಅನುಮಾನ..!

ಲೋಕಸಭೆ ಚುನಾವಣೆಯಲ್ಲಿ ಸದಾನಂದಗೌಡರಿಗೆ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂಬ ವದಂತಿಗಳ ಬೆನ್ನಲ್ಲೇ ಮತ್ತೆ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಗುಸುಗುಸು ಕೇಳಿ ಬರುತ್ತಿದೆ. ಈ ಬಗ್ಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರ ಅಚ್ಚರಿ ಹೇಳಿಕೆ ಹಲವು ಅನುಮಾನಗಳಿಗೆ ಕಾರಣವಾಗಿದೆ.

Related Articles

Back to top button