ಟೈಮ್ಸ್ ನೌ ಚುನಾವಣಾ ಪೂರ್ವ ಸಮೀಕ್ಷೆ, ಕರ್ನಾಟಕ: ಬಿಜೆಪಿ ದಳ ಮೈತ್ರಿಗೆ 23 ಸ್ಥಾನ, NDA 366, INDIA104

Views: 65
ಈಗ ಲೋಕಸಭಾ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ 366 ಸ್ಥಾನ ಗಳಿಸಿದರೆ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ 23 ಸ್ಥಾನ ಗೆಲ್ಲಲಿದೆ ಎಂದು ಟೈಮ್ಸ್ ನೌ ಸಮೀಕ್ಷೆ ತಿಳಿಸಿದೆ.
ರಾಜ್ಯದಲ್ಲಿ ಬಿಜೆಪಿ 21, ದಳ 2 ಸ್ಥಾನ ಗೆದ್ದುಕೊಂಡರೆ ಕಾಂಗ್ರೆಸ್ 5 ಸ್ಥಾನಗಳನ್ನು ಗಳಿಸಲಿದೆ ಎಂದು ಈ ಸಮೀಕ್ಷೆ ಹೇಳಿದೆ. ಮತಗಳ ಶೇಕಡಾವಾರು ಪ್ರಮಾಣದಲ್ಲಿ ಬಿಜೆಪಿ 46.2% ಕಾಂಗ್ರೆಸ್ 42.3% ಜೆಡಿಎಸ್ 8.4% ಹಾಗೂ ಇತರ ಪಕ್ಷಗಳು 3.1%ರಷ್ಟು ಮತ ಗಳಿಸಿಕೊಳ್ಳಲಿವೆ.
ಸಿದ್ದರಾಮಯ್ಯ ಸಾಧನೆ ಕುರಿತು 18% ರಷ್ಟು ತೃಪ್ತಿ ವ್ಯಕ್ತಪಡಿಸಿದ್ದು, 27%ರಷ್ಟು ಮಂದಿ ಪರವಾಗಿಲ್ಲ ಎಂದಿದ್ದಾರೆ. 34%ರಷ್ಟು ಮಂದಿ ಅತೃಪ್ತಿ ವ್ಯಕ್ತಪಡಿಸಿದ್ದು, 21%ರಷ್ಟು ಮಂದಿ ಪ್ರತಿಕ್ರಿಯಿಸಿಲ್ಲ
ಗುಜರಾತ್, ಛತ್ತೀಸ್‌ಗಢ, ದೆಹಲಿಯ ಎಲ್ಲ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದ್ದು ಒಟ್ಟು 366 ಸ್ಥಾನಗಳನ್ನು ಎನ್‌ಡಿಎ ಒಕ್ಕೂಟ ಗಳಿಸಲಿದೆ. INDIA ಒಕ್ಕೂಟ 104, ಇತರರು 73 ಸ್ಥಾನ ಗಳಿಸಲಿದೆ.
ಶೇಕಡಾವಾರುಮತ ಪ್ರಮಾಣದಲ್ಲಿ ಎನ್‌ಡಿಎ 41.8% ಮತ ಪಡೆದರೆ INDIA ಒಕ್ಕೂಟ 28.6% ಮತ ಪಡೆಯಲಿದ್ದಾರೆ. ಇತರರು 29.6% ಮತ ಗಳಿಸಲಿದ್ದಾರೆ ಎಂದು ಹೇಳಿದೆ. ಉತ್ತರ ಪ್ರದೇಶದ 80 ಸ್ಥಾನಗಳ ಪೈಕಿ ಬಿಜೆಪಿ 77 ಸ್ಥಾನಗಳನ್ನು ಗೆಲ್ಲಲಿದೆ. ನಿತೀಶ್‌ಕುಮಾರ್ ಸೇರ್ಪಡೆಯಿಂದ ಬಿಹಾರದಲ್ಲಿ ಎನ್‌ಡಿಎ 35 ಸೀಟುಗಳನ್ನು ಗೆಲ್ಲಲಿದ್ದು, ಇತರ ಪಕ್ಷಗಳು 5 ಸ್ಥಾನಗಳಿಗೆ ತೃಪ್ತಿಪಡಬೇಕಾಗುತ್ತದೆ.
ಪಶ್ಚಿಮ ಬಂಗಾಳದ ಒಟ್ಟು 42 ಸ್ಥಾನಗಳಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ (TMC) 26 ಕ್ಷೇತ್ರಗಳನ್ನು ಗೆಲ್ಲಲಿದೆ. ತಮಿಳುನಾಡಿನಲ್ಲಿ ಎನ್‌ಡಿಎ ಒಂದು ಹಾಗೂ ಇಂಡಿಯಾ ಮೈತ್ರಿಕೂಟ 36 ಸ್ಥಾನವನ್ನು ಪಡೆಯಲಿದೆ.