ಇತರೆ
ಡಾನ್ಸ್ ವಿಚಾರಕ್ಕೆ ಕಾಲೇಜಿನಲ್ಲಿ ಗಲಾಟೆ : ಪಿಯುಸಿ ವಿದ್ಯಾರ್ಥಿ ಬರ್ಬರ ಕೊಲೆ

Views: 0
ಬೆಂಗಳೂರಿನ ಮಂಜುನಾಥ ನಗರದ ಗೌತಮ ಕಾಲೇಜು ಆವರಣದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ ಮಾಡಿರುವ ಘಟನೆ ಸೋಮವಾರ ನಡೆದಿದೆ.
ಹತ್ಯೆಯಾದ ವಿದ್ಯಾರ್ಥಿಯನ್ನು ಸುಹೇಲ್( 17) ಎಂದು ಗುರುತಿಸಲಾಗಿದೆ.
ಗೌತಮ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಸುಹೇಲ್ ಹಾಗೂ ಇತರ ವಿದ್ಯಾರ್ಥಿಗಳ ನಡುವೆ ಡ್ಯಾನ್ಸ್ ಮಾಡುವ ವಿಚಾರಕ್ಕಾಗಿ ಗಲಾಟೆ ನಡೆದಿತ್ತು .ಈ ವಿಚಾರ ಮಾತಿಗೆ ಮಾತು ಬೆಳೆದು ಗಲಾಟೆ ತೀವ್ರಗೊಂಡಿತ್ತು.ಕೊನೆಯಲ್ಲಿ ವಿದ್ಯಾರ್ಥಿಯು ಕೊಲೆಯಲ್ಲಿ ಧಾರುಣ ಅಂತ್ಯ ಕಂಡಿದ್ದಾನೆ.
ಎರಡು ತಿಂಗಳ ಹಿಂದೆ ಬೆಂಗಳೂರಿನ ಪ್ರತಿಷ್ಠಿತ ರೇವಾ ಕಾಲೇಜಿನಲ್ಲಿ ವಿದ್ಯಾರ್ಥಿಯೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಘಟನೆಯು ಸಹ ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿ ಕಾಲೇಜಿನ ಸಾಂಸ್ಕೃತಿಕ ಉತ್ಸವ ವೇಳೆಯಲ್ಲಿ ನಡೆದಿತ್ತು.