ಡಾ.ವಿದ್ಯಾಭೂಷಣರಿಗೆ ರಾಜ್ಯಪಾಲರಿಂದ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ

Views: 0
ಕೋಟ:ಕಾರಂತ ಹುಟ್ಟೂರ ಪ್ರಶಸ್ತಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಂಗೀತಲೋಕದ ದಿಗ್ಗಜರೆನಿಸಿಕೊಂಡ ಡಾ.ವಿದ್ಯಾಭೂಷಣರಿಗೆ ಪ್ರದಾನ ಮಾಡಿದರು.
ಕೋಟದ ಕಾರಂತ ಥೀಮ್ ಪಾರ್ಕ್‍ನಲ್ಲಿ ಕೋಟತಟ್ಟು ಗ್ರಾಮಪಂಚಾಯತ್,ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಇವರ ಆಶ್ರಯದಲ್ಲಿ ಡಾ. ಕೋಟ ಶಿವರಾಮ ಕಾರಂತರ ಜನ್ಮದಿನೋತ್ಸವದ ಅಂಗವಾಗಿ ಹುಟ್ಟೂರ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವಿದ್ಯಾಭೂಷಣ “ಮಹಾನ್ ಸಾಧಕನ ಹೆಸರಿನಲ್ಲಿ ಪ್ರಶಸ್ತಿ ಸ್ವೀಕರಿಸುವುದೆ ದೊಡ್ಡಭಾಗ್ಯ .ಇದು ಬಯಸದೇ ಬಂದ ಭಾಗ್ಯ ಪ್ರಶಸ್ತಿಯನ್ನು ಹುಡುಕಿಕೊಂಡು ಹೋಗಬಾರದು ಅದು ನಮ್ಮನ್ನು ಅರಸಿಕೊಂಡು ಬರಬೇಕು.ಇದೊಂದು ಮುಂದಿನ ಜನಾಂಗಕ್ಕೆ ಕಾರಂತರನ್ನು ಪರಿಚಯಿಸುವಂತೆ ಮಾಡಿದೆ ಎಂದರು”
ಪ್ರಶಸ್ತಿ ಪ್ರದಾನ ಮಾಡಿದ ರಾಜ್ಯದ ಘನತೆ ವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮಾತನಾಡಿ, ಕಾರಂತರ ಸಾಹಿತ್ಯ, ಕಲೆ, ಸಂಸ್ಕೃತಿಯ ಅನಾವರಣ ಕಾರಂತ ಥೀಂ ಪಾರ್ಕ್ ಮೂಲಕ ಯುವ ಸಮೂಹವನ್ನು ತಲುಪುತ್ತಿದೆ. ಕಾರಂತರು ಗಾಂಧೀಜಿ ಸಿದ್ಧಾಂತದ ಅನುಯಾಯಿಯಾಗಿದ್ದರು ಎಂದರು.
ಈ ಸಂದರ್ಭದಲ್ಲಿ ರಾಜ್ಯಪಾಲರಿಗೆ ಕರಾವಳಿಯ ಗಂಡುಕಲೆ ಯಕ್ಷ ಕೀರಿಟ ಧರಿಸಿ ಗೌರವಿಸಲಾಯಿತು.ಗಾಂಧಿ ಪುರಸ್ಕಾರ ಪಡೆದ ಹಲವು ಗ್ರಾಮಪಂಚಾಯತ್ ಗಳನ್ನು ಗುರುತಿಸಿ ಅಭಿನಂದಿಸಲಾಯಿತು.
ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ. ಅಧ್ಯಕ್ಷತೆ ವಹಿಸಿದ್ದರು.ಸಭಾ ಕಾರ್ಯಕ್ರಮದ ಮೊದಲು ಕಾರಂತ ಪುತ್ಥಳಿಗೆ ರಾಜ್ಯಪಾಲರು ಮಾಲಾರ್ಪಣೆಗೈದು, ಕಾರಂತ ಥೀಂ ಪಾರ್ಕನಲ್ಲಿ ನಡೆಯುವ ವಿವಿಧ ಕಲಾ ಚಟುವಟಿಕೆಗಳನ್ನು ವೀಕ್ಷಿಸಿದರು.
ಉಡುಪಿ ಜಿಲ್ಲಾ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶಪಾಲ್ ಸುವರ್ಣ,ಗುರುರಾಜ್ ಗಂಟಿಹೊಳೆ , ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಜಿಲ್ಲಾ.ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಕುಂದಾಪುರ ಎ.ಸಿ ರಶ್ಮಿ, ತಹಶೀಲ್ದಾರ್ ಶೋಭಾಲಕ್ಷ್ಮೀ, ಬ್ರಹ್ಮಾವರ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಹೆಚ್ ವಿ ಇಬ್ರಾಹಿಂಪುರ್, ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್, ಪ್ರತಿಷ್ಠಾನದ ಸದಸ್ಯ ಯು.ಎಸ್ ಶೆಣೈ ಇದ್ದರು.
ಕಾರಂತ ಹುಟ್ಟೂರ ಪ್ರಶಸ್ತಿ ರೂವಾರಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಸದಸ್ಯ ಸತೀಶ್ ವಡ್ಡರ್ಸೆ ನಿರೂಪಿಸಿದರು. ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ವಂದಿಸಿದರು.