ಡಾl ಬಿ.ಬಿ ಹೆಗ್ಡೆ ಕಾಲೇಜಿನ ಅಂತಿಮ ಬಿಸಿಎ ವಿದ್ಯಾರ್ಥಿಗಳಿಗೆ “ಕರಿಯರ್ ಗೈಡೆನ್ಸ್ “ಕಾರ್ಯಕ್ರಮ

Views: 28
ಕುಂದಾಪುರ:ಡಾ ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕಶಾಸ್ತ್ರ ವಿಭಾಗ ಮತ್ತು ಪ್ಲೇಸ್ಮೆಂಟ್ ಸೆಲ್ ಆಶ್ರಯದಲ್ಲಿ ಸೆಪ್ಟೆಂಬರ್14 ರಂದು ಅಂತಿಮ ವರ್ಷದ ಬಿ.ಸಿ.ಎ ವಿದ್ಯಾರ್ಥಿಗಳಿಗಾಗಿ “ಕರಿಯರ್ ಗೈಡೆನ್ಸ್ ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ.ಉಮೇಶ್ ಶೆಟ್ಟಿ ವಹಿಸಿದ್ದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಕಾಲೇಜಿನ ಡೀನ್ (ಅಕಾಡೆಮಿಕ್ಸ್) ಶ್ರೀ ಗಿರಿರಾಜ್ ಭಟ್ ರವರು “ನಾವು ಸಂದರ್ಶನಕ್ಕೆ ಹೋದಾಗ ಸಲ್ಲಿಸುವ ರೆಸೂಮ್ ಎನ್ನುವುದು ನಮ್ಮ ಸಂಪೂರ್ಣ ಜ್ಞಾನ, ವ್ಯಕ್ತಿತ್ವ, ಸಾಮರ್ಥ್ಯ ಮತ್ತು ಕೌಶಲ್ಯವನ್ನು ಸಂದರ್ಶನಕಾರರಿಗೆ ಮನದಟ್ಟು ಮಾಡಿಸುವಂತಿರಬೇಕು ಎಂದರು.
ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಶ್ರೀ ಮಹೇಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಚೇತನ್ ಶೆಟ್ಟಿ ಕೋವಾಡಿಯವರು ಹಾಗೂ ಪ್ಲೇಸ್ಮೆಂಟ್ ಆಫೀಸರ್ ಶ್ರೀ ಸುರೇಶ್ ಕಾಮತ್ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು, ಗಣಕಶಾಸ್ತ್ರ ಪ್ರಾಧ್ಯಾಪಕರಾದ ಶ್ರೀಮತಿ ಜಯಲಕ್ಷ್ಮಿ ಸ್ವಾಗತಿಸಿದರು.ಶ್ರೀ ವೆಂಕಟೇಶ್ ಶೆಟ್ಟಿ ವಂದಿಸಿದರು.
ಬಿ.ಸಿ.ಎ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಂದರ್ಶನವನ್ನು ಎದುರಿಸುವ ಕುರಿತಾಗಿ ಸಂಪೂರ್ಣ ಮಾಹಿತಿ ಹಾಗೂ ತರಬೇತಿಯನ್ನು ನೀಡಲಾಯಿತು.
ಗಣಕಶಾಸ್ತ್ರ ಪ್ರಾಧ್ಯಾಪಕರಾದ ಹರೀಶ್ ಕಾಂಚನ್ ಕಾರ್ಯಕ್ರಮ ನಿರೂಪಿಸಿದರು.