ಇತರೆ
ಡಿವೈಡರ್‌ಗೆ ಕಾರು ಡಿಕ್ಕಿ; ಐಸಿಐಸಿಐ ಬ್ಯಾಂಕ್ ಮ್ಯಾನೇಜರ್ ಸೇರಿ ಇಬ್ಬರು ಸಾವು

Views: 62
ಮಂಡ್ಯ,-ಬೆಂಗಳೂರು-ಮೈಸೂರು ಹೆದ್ದಾರಿಯ ಶಿಂಷಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಮೇಲಿನ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಬೆಂಗಳೂರಿನ ಐಸಿಐಸಿಐ ಬ್ಯಾಂಕ್ ಮ್ಯಾನೇಜರ್ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಂಗಳೂರಿನ ಐಸಿಐಸಿಐ ಬ್ಯಾಂಕ್‌ನ ಮ್ಯಾನೇಜರ್ ಶಂಕರ್ ಹಾಗೂ ಮಹದೇವು ಮೃತ ದುರ್ದೈವಿಗಳು. ಗಾಯಗೊಂಡ ಕಿಶೋರ್ ಅವರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ.
ಬ್ಯಾಂಕ್ ಸಿಬ್ಬಂದಿ ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದರು. ಶಿಂಷಾ ನದಿ ಸೇತುವೆ ಮೇಲೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಮದ್ದೂರು ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.