ಜನಮನ

ಡಿ.31: ಶುಲ್ಕ ವಿನಾಯಿತಿ ಮುಂದುವರಿಸುವಂತೆ ಸಾಸ್ತಾನ ಟೋಲ್ ವಿರುದ್ಧ ಬೃಹತ್ ಪ್ರತಿಭಟನೆ 

Views: 30

ಉಡುಪಿ: ಸ್ಥಳೀಯ ವಾಣಿಜ್ಯ ವಾಹನಗಳಿಗೆ ಶುಲ್ಕ ವಿನಾಯಿತಿ ಮುಂದುವರಿಸುವಂತೆ ಅಗ್ರಹಿಸಿ ಡಿಸೆಂಬರ್ 31ರಂದು ಸಾಸ್ತಾನ ಟೂಲ್ ವಿರುದ್ಧ ಬೃಹತ್ ಪ್ರತಿಭಟನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸೋಮವಾರ ಸಾಸ್ತಾನ ಶಿವ ಕೃಪಾ ಕಲ್ಯಾಣ ಮಂಟಪದಲ್ಲಿ ರಾಷ್ಟ್ರೀಯ ಹೆದ್ದಾರಿಯ ಜಾಗೃತಿ ಸಮಿತಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೋಟ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ವಾಹನ ಚಾಲಕ ಮಾಲಕ ಹಾಗೂ ಸಾರ್ವಜನಿಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ಅಧ್ಯಕ್ಷ ಶಾಮ ಸುಂದರ ನಾಯರಿ ಮಾತನಾಡಿ, ನಾವು ಸಂಘಟಿತ ಹೋರಾಟ ನಡೆಸದಿದ್ದರೆ ವಿನಾಯಿತಿ ಕೈತಪ್ಪುವ ಸಾದ್ಯತೆ ಹೆಚ್ಚಾಗಿದೆ. ಡಿಸೆಂಬರ್ 30 ರಂದು ಸೋಮವಾರ ಜಿಲ್ಲಾಡಳಿತದ ವತಿಯಿಂದ ಟೋಲ್ ಕಂಪನಿ, ಪ್ರಾಧಿಕಾರ, ಜನಪ್ರತಿನಿಧಿಗಳ ಸಮ್ಮುಖದಲ್ಲಿ ಸಭೆ ನಡೆಯಲಿದ್ದು ಈ ಸಭೆಯಲ್ಲಿ ಸ್ಥಳೀಯ ವಾಣಿಜ್ಯ ವಾಹನಗಳಿಗೆ ಟೋಲ್ ನೀಡಬೇಕೆಂದು ನಿರ್ಧಾರವಾದರೆ ಡಿಸೆಂಬರ್ 31ರಂದು ಕೋಟ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಪ್ರತಿಭಟನೆ ನಡೆಸಲಾಗುವುದು ಎಂದರು.

Related Articles

Back to top button
error: Content is protected !!