ಯುವಜನ
ತಂಗಿಯನ್ನು ಪ್ರೀತಿಸಿದ್ದಕ್ಕೆ ಯುವಕನನ್ನು ಬರ್ಬರವಾಗಿ ಹತ್ಯೆಗೈದ ಸಹೋದರರು

Views: 156
ಕನ್ನಡ ಕರಾವಳಿ ಸುದ್ದಿ: ತಂಗಿಯನ್ನು ಪ್ರೀತಿಸಿದ್ದಕ್ಕೆ ಆಕೆಯ ಸಹೋದರರು, ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಿರಗೂಡಿ ಗ್ರಾಮದಲ್ಲಿ ನಡೆದಿದೆ.
ಪ್ರಶಾಂತ್ ಬಿರಾದರ್ (25) ಕೊಲೆಯಾದ ಯುವಕ. ಯಲ್ಲಾಲಿಂಗ ಮೇತ್ರೆ, ಪ್ರಶಾಂತ್ ಮೇತ್ರೆ ಕೊಲೆ ಅರೋಪಿಗಳು. ಮೃತ ಯುವಕ ಹಾಗೂ ಆರೋಪಿಗಳ ಸಹೋದರಿ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು. ಶುಕ್ರವಾರ ರಾತ್ರಿ 9 ಗಂಟೆಗೆ ನಿರಗೂಡಿ ಗ್ರಾಮದಲ್ಲಿ ಪ್ರಶಾಂತ್ ಹಾಗೂ ಯುವತಿ ಸಹೋದರರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಪ್ರಶಾಂತ್ ತಲೆ ಮೇಲೆ ಯುವತಿಯ ಸಹೋದರರು ಕಲ್ಲು ಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಸ್ಥಳಕ್ಕೆ ಡಿವೈಎಸ್‌ಪಿ ನ್ಯಾಮೇಗೌಡ, ಸಿಪಿಐ ಅಲಿಸಾಬ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.