ಇತರೆ

ತಂದೆಯ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಮಗ ಆತ್ಮಹತ್ಯೆ

Views: 88

ಕನ್ನಡ ಕರಾವಳಿ ಸುದ್ದಿ: ತಂದೆಯ ಸಿಂಗಲ್ ಬ್ಯಾರಲ್ ಬಂದೂಕಿನಿಂದ ಗುಂಡು ಹಾರಿಸಿಕೊಂಡು  ಮಾಡಿಕೊಂಡು ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗ್ರಾಮದಲ್ಲಿ ನಡೆದಿದೆ.

ಬೈಯೇಶ್(28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೈಯೇಶ್ ಇತ್ತೀಚೆಗಷ್ಟೆ ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿದ್ದ ನಿನ್ನೆ ಮನೆಯ ಕುಟುಂಬಸ್ಥರು ಎಲ್ಲಾ ತಿರುಪತಿಗೆ ಹೋಗಿದ್ದಾರೆ. ಬೈಯೇಶ್ ಮನೆಯಲ್ಲಿ ಒಬ್ಬಂಟಿಯಾಗಿದ್ದರು. ಏಕಾಏಕಿ ಫೈರಿಂಗ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಮುಂಜಾನೆ ಕುಟುಂಬಸ್ಥರು ವಾಪಸ್ ಬಂದು ನೋಡಿದಾಗ ಆತ್ಮಹತ್ಯೆ ಬೆಳಕಿಗೆ ಬಂದಿದೆ. ಸದ್ಯ ಸ್ಥಳಕ್ಕೆ ತಿರುಮಲ ಶೆಟ್ಟಿಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

Related Articles

Back to top button