ಇತರೆ
ತನಗೆ ತಾನೇ ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ

Views: 74
ಕನ್ನಡ ಕರಾವಳಿ ಸುದ್ದಿ: ಸಿಆರ್ ಪಿ ಎಫ್ ಯೋಧರೊಬ್ಬರು ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಮ್ಮು-ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ನಡೆದಿದೆ.
ಮೃತ ಯೋಧನನ್ನು ಮಹಾರಾಷ್ಟ್ರ ಮೂಲದ ಪ್ರವೀಣ್ ಪಾಟೀಲ್ ಎಂದು ಗುರುತಿಸಲಾಗಿದೆ. ಬೆಳಿಗ್ಗೆಯಷ್ಟೇ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಟಿಕ್ರಿ ಪ್ರದೇಶದಲ್ಲಿ ರಸ್ತೆ ಉದ್ಘಾಟನಾ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಬಳಿಕ ತಮ್ಮ ಸರ್ವಿಸ್ ರಿವಾಲ್ವರ್ ನಿಂದ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಯೋಧನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.