ಇತರೆ

ತಾನು ಕಲಿತ ಶಾಲೆಯ ಮಹಡಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Views: 200

ಕನ್ನಡ ಕರಾವಳಿ ಸುದ್ದಿ:ಡೆತ್ ನೋಟ್ ಬರೆದಿಟ್ಟ ಯುವಕ ತಾನು ಕಲಿತ ಶಾಲೆಯ ಆವರಣದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುರ್ನಾಡು ಹೂವಿನಕೊಪ್ಪಲ ನಿವಾಸಿ ಸುಧೀರ್ (32) ಆತ್ಮಹತ್ಯೆ ಮಾಡಿಕೊಂಡವರು.

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಸಂಬಂಧಿಕರಿಗೆ ನನ್ನ ಕಿಡ್ನಿಯನ್ನು ನೀಡಿ, ಮೇ 29ರಂದು ನಿಗದಿಯಾಗಿರುವ ಸಹೋದರನ ವಿವಾಹವನ್ನು ನಿಲ್ಲಿಸಬೇಡಿ ಎಂದು ಡೆತ್ ನೋಟ್ ಬರೆದಿಟ್ಟಿದ್ದಾನೆ.

ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಘಟನೆ ನಡೆದಿದೆ.

ಪೇಂಟರ್‌ ಆಗಿದ್ದ ಸುಧೀರ್, ನಸುಕಿನ ಜಾವ ಬೈಕ್‌ನಲ್ಲಿ ಹಾಲು ತರಲು ಮನೆಯಿಂದ ತೆರಳಿದ್ದರು. ತಡವಾದರೂ ಮಗ ಬಾರದ ಕಾರಣ ಅವರ ತಾಯಿ ಸುಧೀರ್ ಅವರನ್ನು ಹುಡುಕಿಕೊಂಡು ಹೋದಾಗ ಮನೆ ಸಮೀಪದ ಶಾಲೆಯ ಹೊರಗಡೆ ಬೈಕ್ ಕೀ ಸಮೇತ ಪತ್ತೆಯಾಗಿತ್ತು. ಶಾಲೆಯೊಳಗೆ ಗಮನಿಸುವಾಗ ಸುಧೀರ್ ಅವರು ಶಾಲೆಯ ಮಹಡಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ಅವಿವಾಹಿತರಾಗಿದ್ದ ಸುಧೀರ್ ಅವರ ಸಹೋದರಿಯ ಪತಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾನೆ. ಅವರಿಗೆ ತನ್ನ ಕಿಡ್ನಿ ದಾನ ಮಾಡುವಂತೆ ಹಾಗೂ ಮೇ 29ರಂದು ನಿಗದಿಯಾಗಿರುವ ಸಹೋದರನ ವಿವಾಹವನ್ನು ನಿಲ್ಲಿಸದಂತೆ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

Back to top button