ತಿಹಾರ್ ಜೈಲು ಪಾಲಾದ ಕೇಜ್ರಿವಾಲ್..ಏ.15 ರವರೆಗೆ ನ್ಯಾಯಾಂಗ ಬಂಧನ

Views: 97
ನವದೆಹಲಿ: ಮದ್ಯ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿಯ ಇಡಿ ವಿಶೇಷ ಕೋರ್ಟ್ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಸದ್ಯ ಅವರನ್ನು ತಿಹಾರ್ ಜೈಲಿಗೆ ಕಳುಹಿಸಲಾಗಿದೆ.
ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ಸಿಎಂ ಕೇಜ್ರಿವಾಲ್ರನ್ನು ಅರೆಸ್ಟ್ ಮಾಡಿತ್ತು. ಈ ಹಿನ್ನೆಲೆಯಲ್ಲಿ ಏಪ್ರಿಲ್ 1ಕ್ಕೆ ಅವರ ಕಸ್ಟಡಿಯ ಅವಧಿ ಮುಗಿದ ಕಾರಣ ಮತ್ತೆ ಕೇಜ್ರಿವಾಲ್ರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಕೋರ್ಟ್ ವಿಚಾರಣೆ ವೇಳೆ ಇನ್ನು 15 ದಿನ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬೇಕು ಎಂದು ಇಡಿ ಮನವಿ ಮಾಡಿತ್ತು. ಇಡಿಯ ಮನವಿಯಂತೆ ಮತ್ತೆ ಏಪ್ರಿಲ್ 15ರವರೆಗೆ ಸಿಎಂ ಕೇಜ್ರಿವಾಲ್ರನ್ನ ಬಂಧನಕ್ಕೆ ಒಪ್ಪಿಸಲಾಗಿದೆ.
ಇಡಿ ಅಧಿಕಾರಿಗಳು ವಿಚಾರಣೆ ವೇಳೆ ಪ್ರತಿ ಪ್ರಶ್ನೆಗೂ ‘ನನಗೆ ಏನು ಗೊತ್ತಿಲ್ಲ’ ಎಂದು ಸಿಎಂ ಜೇಜ್ರಿವಾಲ್ ಉತ್ತರ ನೀಡುತ್ತಿದ್ದಾರೆ. ಇದರಿಂದ ಸಿಎಂ ವಿಚಾರಣೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಕೋರ್ಟ್ ಮುಂದೆ ಇಡಿ ಹೇಳಿದೆ.