ಇತರೆ

ತುಂಗಾ ನದಿ ಹಿನ್ನೀರಿನಲ್ಲಿ ತೇಲಿ ಬಂತು ಮೂವರ ಶವ: ಕೊಲೆಯೋ? ಆತ್ಮಹತ್ಯೆಯೋ?

Views: 33

ಕನ್ನಡ ಕರಾವಳಿ ಸುದ್ದಿ: ತುಂಗಾ ನದಿ ಹಿನ್ನೀರಿನಲ್ಲಿ ಮೂವರ ಮೃತದೇಹ ಪತ್ತೆಯಾಗಿರುವ ಘತನೆ ಶುವಮೊಗ್ಗ ಜಿಲ್ಲೆಯ ಸಕ್ರೇಬೈಲು ಆನೆಬಿಡಾರದ ಬಳಿ ನಡೆದಿದೆ.

ಇಲ್ಲಿನ 10ನೇ ಮೈಲಿಕಲ್ಲಿನ ಹಿನ್ನೀರಿನಲ್ಲಿ ಮೂರು ಶವಗಳು ಪತ್ತೆಯಾಗಿವೆ. ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆಯ ಶವ ಪತ್ತೆಯಾಗಿದೆ. ಆದರೆ ಮೃತದೇಹದ ಗುರುತು ಪತ್ತೆಯಾಗಿಲ್ಲ.

ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಎರಡು ಮೂರು ದಿನಗಳ ಹಿಂದೆಯೇ ಆತ್ಮಹತ್ಯೆಗೆ ಶರಣಾಗಿರುವ ಶಂಕೆಯೂ ಇದೆ. ಘಟನಾ ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

Related Articles

Back to top button