ಕರಾವಳಿ

ತ್ರಾಸಿ:ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ, ಸವಾರ ಬಾಲಕ ಸಾವು, ಮತ್ತೊಬ್ಬ ಬಾಲಕ ಗಂಭೀರ

Views: 117

ಕುಂದಾಪುರ: ತ್ರಾಸಿ ಹೆದ್ದಾರಿಯಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಗಂಗೊಳ್ಳಿ ನಿವಾಸಿ ಕಾಶಿಫ್ (17) ಗಂಭೀರ ಗಾಯಗೊಂಡು ಸಾವನಪ್ಪಿದ ಘಟನೆ ನಡೆದಿದೆ.

ಆಟೋರಿಕ್ಷವನ್ನು ಓವರ್ ಟೆಕ್ ಮಾಡುವ ವೇಳೆ ಒಮ್ಮೆಲೇ ಎಡಕ್ಕೆ ತಿರುಗಿಸಿದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರ ಕಾಶಿಫ್ ಹಾಗೂ ಸಹ ಸವಾರ ಮಹಮ್ಮದ್ ಪೈಜ್ (15)ಇಬ್ಬರೂ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಕಾಶಿಪ್ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವನಪ್ಪಿದ್ದಾರೆ

ಮೃತ ಸವಾರನನ್ನು ಗಂಗೊಳ್ಳಿ ಪೋಸ್ಟ್ ಆಫೀಸ್ ಬಳಿ ನಿವಾಸಿ ಅಬ್ದುಲ್ ಖಾದರ್ ಎಂಬುವರ ಮಗ ಮೊಹಮ್ಮದ್ ಕಾಶಿಫ್ ಎಂದು ಗುರುತಿಸಲಾಗಿದೆ. ಗಂಗೊಳ್ಳಿ ಪೋಸ್ಟ್ ಆಫೀಸ್ ಬಳಿ ನಿವಾಸಿ ಮೊಹಮ್ಮದ್ ಫೈಜ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ‌. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಗಸ್ತು ವಾಹನ ಸ್ಥಳಕ್ಕಾಗಮಿಸಿ ರಸ್ತೆ ಸಂಚಾರ ಸುಗಮಗೊಳಿಸಿತು. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button