ಕ್ರೀಡೆ

ತ್ರೋಬಾಲ್ ಮತ್ತು ವಾಲಿಬಾಲ್ ಪಂದ್ಯಾಟದಲ್ಲಿ ಜ್ಞಾನದಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Views: 143

ಕನ್ನಡ ಕರಾವಳಿ ಸುದ್ದಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೇಸರ್ ಕೊಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೈಂದೂರು ಹೋಬಳಿ ಮಟ್ಟದ 14 ರ ವಯೋಮಾನದ ಬಾಲಕಿಯರ ತ್ರೋಬಾಲ್ ಮತ್ತು ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನಿಯಾಗಿ ಜ್ಞಾನದಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ್ ತರಬೇತಿ ನೀಡಿರುತ್ತಾರೆ.ಸಾಧನೆಗೈದ ವಿದ್ಯಾರ್ಥಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಶುಭ ಕೋರಿರುತ್ತಾರೆ.

Related Articles

Back to top button
error: Content is protected !!