ಇತರೆ

ದೂರು ನೀಡಲು ಬಂದ ಸಂತ್ರಸ್ತೆ ಮೇಲೆ ಆತ್ಯಾಚಾರ: ಠಾಣೆಯ ಕಾನ್ಸ್‌ಟೇಬಲ್ ಸೇರಿ ಇಬ್ಬರ ಬಂಧನ

Views: 297

ಕನ್ನಡ ಕರಾವಳಿ ಸುದ್ದಿ: ದೂರು ನೀಡಲು ಠಾಣೆಗೆ ಹೋದ ಆತ್ಯಾಚಾರಕ್ಕೊಳಗಾದ ಬಾಲಕಿಗೆ ನೆರವಾಗುವ ಸೋಗಿನಲ್ಲಿ ರೇಪ್ ಮಾಡಿದ ಆರೋಪದ ಮೇಲೆ ಕಾನ್ಸ್ ಟೇಬಲ್ ಸೇರಿ ಇಬ್ಬರು ಆರೋಪಿಗಳನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಪ್ರಾಪ್ತಯ ತಾಯಿ ನೀಡಿದ ದೂರಿನ ಮೇರೆಗೆ ಬೊಮ್ಮನಹಳ್ಳಿ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅರುಣ್ ಹಾಗೂ ಸಂತ್ರಸ್ತೆಯ ಸ್ನೇಹಿತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 17 ವರ್ಷದ ಸಂತ್ರಸ್ತೆ ಬೊಮ್ಮನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನೆಲೆಸಿದ್ದಳು. ಈ ವೇಳೆ ನೆರೆಮನೆ ನಿವಾಸಿ, ವಿವಾಹಿತನಾಗಿದ್ದ ವ್ಯಕ್ತಿಯ ಪರಿಚಯವಾಗಿದೆ. ಆರೋಪಿಯು ಪ್ರೀತಿಸಿ ಮದುವೆ ಮಾಡಿಕೊಳ್ಳುವುದಾಗಿ ಪುಸಲಾಯಿಸಿ, ಬಾಲಕಿಯ ಮೇಲೆ ನಿರಂತರ ಆತ್ಯಾಚಾರವೆಸಗಿ ಹಲ್ಲೆ ಮಾಡಿದ್ದಾನೆ. ಈ ಬಗ್ಗೆ ನೊಂದ ಬಾಲಕಿ ತಾಯಿ ಬಳಿ ಹೇಳಿಕೊಂಡಿದ್ದಳು ಎಂದು ಬೊಮ್ಮನಹಳ್ಳಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಂತ್ರಸ್ತೆಯನ್ನು ಕಾನ್ಸ್‌ಟೇಬಲ್ ಅರುಣ್ ಪರಿಚಯಿಸಿಕೊಂಡು ನ್ಯಾಯಿ ಕೊಡಿಸುವುದಾಗಿ ಭರವಸೆ ನೀಡಿದ್ದರು. ಅಲ್ಲದೆ, ಕೆಲಸ ಕೊಡಿಸುವುದಾಗಿ ನಂಬಿಸಿದ್ದ. ಕಳೆದ ಡಿಸೆಂಬರ್‌ನಲ್ಲಿ ಬಿಟಿಎಂ ಲೇಔಟ್‌ನ ಓಯೋ ರೂಮಿಗೆ ಬಾಲಕಿಯನ್ನು ಕರೆಸಿಕೊಂಡ ಕಾನ್ಸ್‌ಟೇಬಲ್ ಮದ್ಯದಲ್ಲಿ ಪ್ರಜ್ಞೆ ತಪ್ಪುವ ಔಷಧ ಬೆರೆಸಿ ಕುಡಿಸಿ ಆಕೆ ಮೇಲೆ ಆತ್ಯಾಚಾರವೆಸಗಿದ್ದಾನೆ ಎಂದು ದೂರಲಾಗಿ ಅಲ್ಲದೆ, ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ತನ್ನ ಬಳಿ ಖಾಸಗಿ ವಿಡಿಯೋಗಳಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾಗಿ ಸಂತ್ರಸ್ತೆಯ ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ. ಇಬ್ಬರ ವಿರುದ್ಧ ಪೋಕ್ಸ್ ಹಾಗೂ ಬಿಎನ್ಎ ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡಿರುವ ಮೈಕೋ ಲೇಔಟ್ ಪೊಲೀಸರು ಕೃತ್ಯ ನಡೆದ ಸ್ಥಳ ಆಧರಿಸಿ ಬೊಮ್ಮನಹಳ್ಳಿ ಠಾಣೆಗೆ ಪ್ರಕರಣ ವರ್ಗಾಯಿಸಿದ್ದರು. ಈ ಸಂಬಂಧ ತನಿಖೆ ನಡೆಸಿ, ಇಬ್ಬರನ್ನು ಬಂಧಿಸಿ ಪರಪ್ಪನ ಅಗ್ರಹಾರ  ಜೈಲಿಗಟ್ಟಿದ್ದಾರೆ.

ಅದೇನೆ ಇರಲಿ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ರೆ ಪೊಲೀಸರೇ ಅಪ್ರಾಪ್ತೆ ಮೇಲೆರೆಗಿದ್ನಾ? ಪೊಲೀಸರ ನಿಸ್ಪಕ್ಷಪಾತ ತನಿಖೆಯಿಂದಷ್ಟೇ ಸತ್ಯಾಸತ್ಯತೆ ಹೊರಬರಬೇಕಿದೆ

Related Articles

Back to top button