ದೆಹಲಿಗೆ ತೆರಳಿದ ಕುಮಾರಸ್ವಾಮಿಗೆ ಬಿಜೆಪಿ ಹೈಕಮಾಂಡ್‌ನಿಂದ ಬಿಗ್ ಆಫರ್..! ಏನು?

Views: 174
28 ಕ್ಷೇತ್ರಗಳ ಫೈಕಿ ಬಿಜೆಪಿಗೆ 25 ಜೆಡಿಎಸ್ಗೆ 3 ಕ್ಷೇತ್ರಗಳನ್ನು ನೀಡುವ ಕುರಿತು ಮಾತುಕತೆಯಾಗಿದೆ. ಅಂತಿಮ ಚರ್ಚೆ ನಡೆಸಲು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ದೆಹಲಿಗೆ ತೆರಳಿ ಕೇಂದ್ರ ಸಚಿವ ಅಮಿತ್ ಶಾರನ್ನು ಭೇಟಿಯಾಗಿದ್ದಾರೆ. ಈ ವೇಳೆ ಜೆಡಿಎಸ್ನ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಹಾಗೂ ಅನಸೂಯ ಮಂಜುನಾಥ್ ಜೊತೆಯಲ್ಲಿ ಇದ್ದರು.
ಬೆಂಗಳೂರು ಗ್ರಾಮಾಂತರ ಲೋಕಸಭೆಯ ಕ್ಷೇತ್ರದ ಬಗ್ಗೆ ಅಮಿತ್ ಶಾ ಜೊತೆ ದಳಪತಿಗಳು ಚರ್ಚೆ ನಡೆಸಿದ್ದಾರೆ. ಈ ವೇಳೆ ಮಂಜುನಾಥ್ ಪರ ಬಂದು ಪ್ರಚಾರ ಮಾಡಬೇಕು ಅಂತ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಇದಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿರುವ ಚಾಣಕ್ಯ ಅಮಿತ್ ಶಾ ನಾನೇ ವೈಯಕ್ತಿಕವಾಗಿ ಮಂಜುನಾಥ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಗ್ಗೆ ಗಮನ ಹರಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಸೋಲಿಲ್ಲದ ಸರದಾರ ಡಿಕೆ ಸುರೇಶ್ಗೆ ಸೋಲಿನ ರುಚಿ ತೋರಿಸಲು ಹಾಗೂ ಡಾಕ್ಟರ್ ಮಂಜುನಾಥ್ ಗೆಲುವಿಗೆ ಚಾಣಕ್ಯ ಕಾರ್ಯತಂತ್ರ ಹೆಣೆಯುತ್ತಿದ್ದಾರೆ. ಈ ಚರ್ಚೆ ಮಧ್ಯೆ ಅಮಿತ್ ಶಾ ಅವರು ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಬಿಗ್ ಆಫರ್ ನೀಡಿದ್ದಾರೆ.
ಮೂರು ಕ್ಷೇತ್ರದ ಜೊತೆಗೆ ಮತ್ತೊಂದು ಕ್ಷೇತ್ರ ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡುವ ಬಗ್ಗೆ ಚರ್ಚೆ ನಡೆದಿದೆ ಆದರೆ ಕುಮಾರಸ್ವಾಮಿ ಕಣಕ್ಕಿಳಿಯುವುದಾದರೆ ಕ್ಷೇತ್ರ ಬಿಟ್ಟುಕೊಡಲಾಗುವುದು ಎನ್ನಲಾಗಿದೆ.ಅನಾರೋಗ್ಯ ಸಮಸ್ಯೆಯಿಂದ ಚುನಾವಣೆ ಸ್ಪರ್ಧೆ ಕಷ್ಟ ಎಂದ ಹೆಚ್ಡಿಕೆ
ಮುಂದಿನ 48 ಗಂಟೆಯಲ್ಲಿ ಜೆಡಿಎಸ್ ಟಿಕೆಟ್ ಘೋಷಣೆ ಮಾಡಲಿದೆ. ಅಮಿತ್ ಶಾ ಭೇಟಿಗೆ ಕಾಯ್ದಿದ್ದ ಹೆಚ್ಡಿ ಕುಮಾರಸ್ವಾಮಿ ಈಗ ಟಿಕೆಟ್ ಘೋಷಣೆಗೆ ಮುಂದಾಗಿದ್ದಾರೆ. ಮಂಡ್ಯ, ಹಾಸನ, ಕೋಲಾರ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳ ಹೆಸರನ್ನು ನಾಳೆ ಅಥವಾ ನಾಡಿದ್ದು ಹೆಚ್ಡಿಕೆ ಘೋಷಿಸಲಿದ್ದಾರೆ ಎನ್ನಲಾಗಿದೆ.