ದೆಹಲಿಗೆ ಬರುವಂತೆ ಕರೆ ಬಂದರೂ ಈಶ್ವರಪ್ಪ ನಿರ್ಲಕ್ಷ: ಪಕ್ಷೇತರ ಅಭ್ಯರ್ಥಿಯಾಗಿ ಘೋಷಣೆ..!

Views: 74
ಶಿವಮೊಗ್ಗ, : ಕೆ. ಎಸ್. ಈಶ್ವರಪ್ಪ ಪುತ್ರ ಕಾಂತೇಶ್‌ಗೆ ಹಾವೇರಿ ಕ್ಷೇತ್ರದ ಟಿಕೆಟ್ ಸಿಕ್ಕಿಲ್ಲ ಎಂದು ಅಸಮಾಧಾನಗೊಂಡ ಅವರು ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯವ ಘೋಷಣೆ ಮಾಡಿದ್ದಾರೆ.
ಬಿಜೆಪಿ ಹೈಕಮಾಂಡ್ ನಾಯಕರು ಕೆ. ಎಸ್. ಈಶ್ವರಪ್ಪ ಜೊತೆ ನಡೆಸಿದ ಸಂಧಾನ ವಿಫಲವಾಗಿದೆ. ಶಿವಮೊಗ್ಗಕ್ಕೆ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದರು. ನಡೆದ ಸಮಾವೇಶಕ್ಕೆ ಈಶ್ವರಪ್ಪ ಗೈರಾದರು.
ಕಾಂತೇಶ್‌ಗೆ ಹಾವೇರಿ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಲು ಯಡಿಯೂರಪ್ಪ, ಯಡಿಯೂರಪ್ಪ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಕಾರಣ ಎಂದು ಈಶ್ವರಪ್ಪ ಆರೋಪಿಸುತ್ತಿದ್ದಾರೆ.
ಆದರೆ ಈಶ್ವರಪ್ಪರನ್ನು ದೆಹಲಿಗೆ ಬರುವಂತೆ ಸ್ವತಃ ಯಡಿಯೂರಪ್ಪ ಕರೆ ಮಾಡಿ ಆಹ್ವಾನಿಸಿದ್ದರು. ಆದರೆ ಅವರು ಆ ಕರೆಯನ್ನು ನಿರ್ಲಕ್ಷ್ಯ ಮಾಡಿದರು. ಅಲ್ಲದೇ ಮೋದಿ ಸಮಾವೇಶಕ್ಕೆ ಆಹ್ವಾನಿಸಿದರೂ ಸಹ ಶಿವಮೊಗ್ಗದಲ್ಲಿಯೇ ಇದ್ದರೂ ಈಶ್ವರಪ್ಪ ಹೋಗಲಿಲ್ಲ.
ತಾವು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದು ಖಚಿತ ಎಂದು ಹೇಳುವ ಮೂಲಕ ಈಶ್ವರಪ್ಪ ಬಿಜೆಪಿ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಈಗ ನಡೆಯುತ್ತಿರುವ ಬೆಳವಣಿಗೆ ನೋಡಿದರೆ ಅವರು ತಮ್ಮ ಪಟ್ಟು ಸಡಿಲಿಸುವ ಸಾಧ್ಯತೆಗಳು ತೀರಾ ಕಡಿಮೆ ಇದೆ.
ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮುನ್ನ ಹಲವು ಗಣ್ಯರು, ಸ್ವಾಮೀಜಿಗಳನ್ನು ಭೇಟಿಯಾಗಿ ಬೆಂಬಲ ನೀಡುವಂತೆ ಮನವಿ ಮಾಡುತ್ತಿದ್ದಾರೆ.