ಇತರೆ

ದೋಣಿಗೆ ನೌಕಾಪಡೆ ಸ್ಪೀಡ್‌ಬೋಟ್ ಡಿಕ್ಕಿ: 13 ಸಾವು, 101 ಜನರ ರಕ್ಷಣೆ

Views: 131

ಮಹಾರಾಷ್ಟ್ರ: ಮುಂಬೈನ ಗೇಟ್‌ವೇ ಆಫ್ ಇಂಡಿಯಾ ಸಮೀಪ ಪ್ರಯಾಣಿಕರಿದ್ದ ದೋಣಿಗೆ ಸ್ಪೀಡ್‌ಬೋಟ್ ಡಿಕ್ಕಿ ಹೊಡೆದು 13 ಮಂದಿ ಮೃತಪಟ್ಟಿದ್ದು, 101 ಮಂದಿಯನ್ನು ರಕ್ಷಿಸಲಾಗಿದೆ. ಮೃತರಲ್ಲಿ ಮೂವರು ನೌಕಾಪಡೆ ಸಿಬ್ಬಂದಿ, 10 ಮಂದಿ ಪ್ರಯಾಣಿಕರು ಸೇರಿದ್ದಾರೆ.

100ಕ್ಕೂ ಹೆಚ್ಚು ಪ್ರವಾಸಿಗರು ಮತ್ತು ಐವರು ಸಿಬ್ಬಂದಿಯಿದ್ದ ನೀಲಕಮಲ್ ದೋಣಿ ಮುಂಬೈ ಬಳಿಯ ಜನಪ್ರಿಯ ಪ್ರವಾಸಿ ತಾಣವಾದ ಎಲಿಫೆಂಟಾ ದ್ವೀಪಗಳಿಗೆ ತೆರಳುತ್ತಿದ್ದಾಗ ಸ್ಪೀಡ್ ಬೋಟ್ ಡಿಕ್ಕಿಯಾಗಿದೆ. ಅಪಘಾತದ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ನೌಕಾಪಡೆ ಮತ್ತು ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ರಕ್ಷಣೆಗಾಗಿ 11 ನೌಕಾಪಡೆಯ ದೋಣಿಗಳು ಮತ್ತು ಮೂರು ಕೋಸ್ಟ್ ಗಾರ್ಡ್ ದೋಣಿಗಳನ್ನು ನಿಯೋಜಿಸಲಾಗಿದೆ. ನಾಲ್ಕು ಹೆಲಿಕಾಪ್ಟರ್‌ಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

Related Articles

Back to top button
error: Content is protected !!