ಇತರೆ
ಧರ್ಮಸ್ಥಳಕ್ಕೆ ತೆರಳುತ್ತಿದ್ದವರ ಕಾರಿನ ಮೇಲೆ ಮರಬಿದ್ದು ನಾಲ್ವರಿಗೆ ಗಂಭೀರ ಗಾಯ

Views: 79
ಕನ್ನಡ ಕರಾವಳಿ ಸುದ್ದಿ :ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಬಿದ್ದು ಕಾರಿನೊಳಗಡೆ ಸಿಲುಕಿದ ನಾಲ್ವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೂಜಿಬಾಳ್ತಿಲ ಬಳಿ ಈ ಘಟನೆ ನಡೆದಿದೆ. ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಕಾರಿನ ಮೇಲೆ ಮರಬಿದ್ದಿದ್ದು, ಕಾರು ಸಂಪೂರ್ಣ ಅಪ್ಪಚ್ಚಿಯಾಗಿದೆ. ಕಾರಿನೊಳಗಡೆ ಸಿಲುಕಿಕೊಂಡವರು ಹೊರಬರಲಾಗದೆ ರಕ್ಷಣೆಗಾಗಿ ಮೊರೆಯಿಟ್ಟಿದ್ದಾರೆ.
ಇತರ ವಾಹನ ಸವಾರರು, ಸ್ಥಳೀಯರು ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಕಾರು ಚಾಲಕ, ಇಬ್ಬರು ಮಳೆಯರು, ಮಗು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಡಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.