ಧರ್ಮಸ್ಥಳದಲ್ಲಿ ಉಚ್ಚಾಟನೆಯಾಗಿದ್ದ ಅನಾಮಿಕ ವ್ಯಕ್ತಿಯ ತನಿಖೆಯಾಗಲಿ–ವಕೀಲ ಕೇಶವ ಗೌಡ

Views: 178
ಕನ್ನಡ ಕರಾವಳಿ ಸುದ್ದಿ: ಅನಾಮಿಕ ವ್ಯಕ್ತಿ ಯಾರು ಅಂತ ಇಡೀ ಧರ್ಮಸ್ಥಳದವರಿಗೆ ಈಗ ಗೊತ್ತಾಗಿದೆ. ಆತ ನಟೋರಿಯಸ್ ಕೆಲಸ ಮಾಡಿದ ಕ್ಷೇತ್ರದಿಂದ ಉಚ್ಚಾಟನೆ ಆಗಿದ್ದ ಎಂದು ಧರ್ಮಸ್ಥಳ ಗ್ರಾಪಂ ಮಾಜಿ ಅಧ್ಯಕ್ಷ, ವಕೀಲ ಕೇಶವ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿದಿನ 30 ಸಾವಿರದಷ್ಟು ಪ್ರವಾಸಿಗರು ಧರ್ಮಸ್ಥಳಕ್ಕೆ ಬರುತ್ತಾರೆ. ಅನೇಕ ಸಮಸ್ಯೆಗಳಿಂದ ಬಂದು ಜೀವನವನ್ನು ಅಂತ್ಯ ಮಾಡುತ್ತಿದ್ದರು. ಪ್ರವಾಸಿಗರು ಮೃತಪಟ್ಟರೆ ಅಂತ್ಯ ಸಂಸ್ಕಾರ ಮಾಡುವುದೇ ದೊಡ್ಡ ಸಾಹಸವಾಗಿತ್ತು. ಅನಾಮಿಕ ವ್ಯಕ್ತಿ ಹೆಣದ ಮೇಲೆ ಇದ್ದ ಚಿನ್ನ, ಹಣ ಕದಿಯುತ್ತಿದ್ದ. ಈ ಕಾರಣಕ್ಕೆ ಆತನನ್ನು 2014 ರಿಂದ ಕೆಲಸದಿಂದ ತೆಗೆದು ಹಾಕಲಾಗಿತ್ತು. ಈ ಬೆಳವಣಿಗೆ ಹಿಂದೆ ಇರುವ ಷಡ್ಯಂತ್ರ ಯಾರದ್ದು ಎಂದು ಗೊತ್ತಿದೆ.
ಕ್ಷೇತ್ರದ ಮೇಲೆ ಆರೋಪ ಮಾಡುವವರಿಗೆ ಅನಾಮಿಕ ವ್ಯಕ್ತಿಯ ಹಿಂದೆ ಯಾರಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ. ಈ ವ್ಯಕ್ತಿಯನ್ನು ವಿಚಾರಣೆ ಮಾಡಬೇಕು, ಮಂಪರು ಪರೀಕ್ಷೆ ಮಾಡಬೇಕು. ಆತನ ಹಿನ್ನೆಲೆಯಲ್ಲಿರುವವರ ಬೈನ್ ಮ್ಯಾಪಿಂಗ್ ಮಾಡಬೇಕು. ಅನಾಮಿಕ ಹೇಳಿದ ಹಾಗೆ ಕೊಲೆ, ಅತ್ಯಾಚಾರ, ಅನ್ಯಾಯ ಪ್ರಕರಣ ನಡೆದಿಲ್ಲ. ಉತ್ಪನನ ಸಂದರ್ಭ ಒಂದೆರಡು ಮೃತ ದೇಹ ಸಿಕ್ಕರೂ ಅಚ್ಚರಿಯಿಲ್ಲ, ಎಸ್‌ಐಟಿ ಮೂಲಕ ಎಲ್ಲಾ ರೀತಿಯ ಸಮಗ್ರ ತನಿಖೆಯಾಗಲಿ ಎಂದು ಹೇಳಿದರು.
ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ರಾಜೀನಾಮೆ ಕೊಡಲು ಒತ್ತಾಯಿಸುತ್ತಾರೆ. ರಾಜೀನಾಮೆ ಸಿಎಂ ಅಥವಾ ಶಾಸಕರಲ್ಲ, ಅವರು ಕ್ಷೇತ್ರದ ಧರ್ಮಾಧಿಕಾರಿಗಳು, ಹತ್ತಾರು ಹೆಣಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತಾರೆ, ಇಂತಹ ಬಣ್ಣದ ಕಾಗೆಗಳನ್ನು ಹಾರಿಸುತ್ತಾರೆ. ಎಲ್ಲರ ತನಿಖೆ ಆಗಬೇಕು, ಎಲ್ಲಾ ಸತ್ಯಗಳು ಹೊರಬರಬೇಕು ಎಂದು ಕೇಶವ ಗೌಡ ಹೇಳಿದರು.






