ಧರ್ಮಸ್ಥಳ ನಿಗೂಢ ಸಾವು ಎಸ್‌ಐಟಿ ತನಿಖೆ ಆರಂಭ

Views: 85
ಕನ್ನಡ ಕರಾವಳಿ ಸುದ್ದಿ: ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ನಿಗೂಢ ಸರಣಿ ಸಾವುಗಳ ತನಿಖೆಗಾಗಿ ರಾಜ್ಯ ಸರಕಾರ ರಚಿಸಿರುವ ವಿಶೇಷ ತನಿಖಾ ತಂಡವು ಶನಿವಾರ ತನ್ನ ತನಿಖೆ ಯನ್ನು ಪ್ರಾರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಸ್‌ಐಟಿ ತನ್ನ ಕಚೇರಿಯನ್ನು ಧರ್ಮಸ್ಥಳದ ಬದಲಿಗೆ ಬೆಳ್ತಂಗಡಿಯಲ್ಲಿ ಆರಂಭಿಸಿದೆ. ಮಲ್ಲಿ ಕಟ್ಟೆಯಲ್ಲಿರುವ ಗುಪ್ತಚರ ಬ್ಯೂರೋ ಆವರಣ ದಲ್ಲಿ ಸ್ಥಾಪಿಸಲಾದ ಎಸ್‌ಐಟಿ ಕಚೇರಿಗೆ ಹಿರಿಯ ಅಧಿಕಾರಿಗಳು ಆಗಮಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಸ್ಥಳಗಳಿಗೆ ಭೇಟಿ ನೀಡಿದೆ
ತನಿಖೆಯ ಮೇಲ್ವಿಚಾರಣೆ ನಡೆಸುತ್ತಿರುವ ಪೊಲೀಸ್ ಉಪ ಮಹಾನಿರ್ದೇಶಕ(ಡಿಐಜಿ) ಡಿಐಜಿ ಎಂ.ಎನ್.ಅನುಚೇತ್ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಅಧಿಕಾರಿಗಳೊಂದಿಗೆ ಉನ್ನತಮಟ್ಟದ ಸಭೆ ಸಮಾಧಿಗಳ ಬಗ್ಗೆ ಆರಂಭದಲ್ಲಿ ಆರೋಪ ಎತ್ತಿದ್ದ ಅನಾಮಧೇಯ ದೂರುದಾರನನ್ನು ಪ್ರಶ್ನಿಸುವ ಕೆಲಸ ಆರಂಭಗೊಂಡಿದೆ. ಎಂ.ಎನ್.ಅನುಚೇತ್ ಅವರು ಮಂಗಳೂರಿಗೆ ಆಗಮಿಸಿದ್ದು, ಎಸ್‌ಐಟಿಗೆ ನಿಯೋಜಿಸಲಾದ 20ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಉನ್ನತಮಟ್ಟದ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ದಯಾಮಾ ಅವರನ್ನು ತನಿಖಾ ಅಧಿಕಾರಿಯಾಗಿ ನೇಮಿಸಲಾಗಿದೆ.ಮೂಲಗಳ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಅಧಿಕಾರಿಗಳನ್ನು ತಂಡಕ್ಕೆ ನಿಯೋಜಿಸಲಾಗಿದೆ. ಇವರಲ್ಲಿ ಧರ್ಮಸ್ಥಳ, ಮೂಲ್ಕಿ ಮತ್ತು ಬೈಂದೂರು ಪೊಲೀಸ್ ಠಾಣೆಗಳ ಇನ್ಸ್ ಪೆಕ್ಟರ್‌ಗಳು ಮತ್ತು ಸಬ್ ಇನ್ಸ್‌ಪೆಕ್ಟರ್‌ಗಳು ಇದ್ದಾರೆ. ಎಸ್‌ಐಟಿ ಆಂತರಿಕ ಮೇಲ್ವಿಚಾರಣೆಯಲ್ಲಿ ಮಾಹಿತಿಗಳನ್ನು ಪಡೆಯುವ ನಿರೀಕ್ಷೆಯಿದ್ದು, ಸಮಾಧಿಗಳ ಬಗ್ಗೆ ಆರಂಭದಲ್ಲಿ ಆರೋಪಗಳನ್ನು ಎತ್ತಿದ್ದ ಅನಾಮಧೇಯ ದೂರುದಾರನನ್ನು ಪ್ರಶ್ನಿಸುವ ಸಾಧ್ಯತೆಯಿದೆ. ಡಿಐಜಿ ಮಲ್ಲಿಕಟ್ಟೆಯಲ್ಲಿರುವ ಎಸ್‌ಐಟಿ ಕಚೇರಿಯ ಲ್ಲಿಯೇ ಹೇಳಿಕೆ ದಾಖಲಿಸುವುದಕ್ಕಾಗಿ ವಿಡಿಯೊ ರೆಕಾರ್ಡಿಂಗ್ ಉಪಕರಣಗಳು ಸೇರಿದಂತೆ ಎಲ್ಲ ಅಗತ್ಯ ವ್ಯವಸ್ಥೆಗಳನ್ನು ವಿಚಾರಣೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.






