ಧರ್ಮಸ್ಥಳ ಪ್ರಕರಣ: ಮಾಧ್ಯಮ ನಿರ್ಬಂಧ ತೆರವು ಅರ್ಜಿ ಸುಪ್ರೀಂ ಕೋರ್ಟ್ ನಕಾರ

Views: 223
ಕನ್ನಡ ಕರಾವಳಿ ಸುದ್ದಿ: ಧರ್ಮಸ್ಥಳದ ಕುರಿತಾಗಿ ವರದಿ ಮಾಡಲು ಮಾಧ್ಯಮಗಳಿಗೆ ವಿಧಿಸಿರುವ ನಿರ್ಬಂಧ ಆದೇಶವನ್ನು ತೆರವುಗೊಳಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಮಾನ್ಯ ಮಾಡಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿತು.
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದ ಮಹಿಳೆಯರ ಕೊಲೆ ಸಂಬಂಧ ವರದಿ ಮಾಡುವುದಕ್ಕೆ ನಿರ್ಬಂಧ ವಿಧಿಸಿ ಆದೇಶ ಮಾಡಲಾಗಿತ್ತು.
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಪ್ರಕರಣಗಳ ಸಂಬಂಧ ಪ್ರಕಟವಾಗಿರುವ ಸುಮಾರು 9 ಸಾವಿರ ಲಿಂಕ್‌ಗಳನ್ನು ಅಳಿಸಿಹಾಕಬೇಕು ಎಂದು ಸುಮಾರು 390 ಮಾಧ್ಯಮ ಸಂಸ್ಥೆಗಳಿಗೆ ಸ್ಥಳೀಯ ಕೋರ್ಟ್ ನೀಡಿದ ನಿರ್ದೇಶನದ ಕಾನೂನು ಮಾನ್ಯತೆಯನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು
ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ಬಿ.ಆರ್. ಗವಾಯಿ, ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಹಾಗೂ ಜಾಯ್‌ಮಲ್ಯ ಬಾಗ್ಚಿ ಅವರಿದ್ದ ಪೀಠ, ಹೈ ಕೋರ್ಟ್‌ನಲ್ಲಿ ಯಾಕೆ ಅರ್ಜಿ ಸಲ್ಲಿಸಿಲ್ಲ ಎಂದು ಅರ್ಜಿದಾರರನ್ನು ಪ್ರಶ್ನಿಸಿತು.ಮೊದಲು ಹೈಕೋರ್ಟ್‌ಗೆ ಹೋಗಿ’ ಎಂದು ಸಿಜೆಐ ಹೇಳಿದರು.
ಯಾವುದೇ ಎಫ್‌ಐಆರ್‌ನಲ್ಲಿ ತಮ್ಮ ವಿರುದ್ಧ ಅಥವಾ ದೇವಾಲಯದ ಅಧಿಕಾರಿಗಳ ವಿರುದ್ಧ ಯಾವುದೇ ನಿರ್ದಿಷ್ಟ ಆರೋಪಗಳಿಲ್ಲದಿದ್ದರೂ, ಆನ್‌ಲೈನ್‌ನಲ್ಲಿ ಸುಳ್ಳು ಮತ್ತು ಮಾನಹಾನಿಕರ ವಿಷಯವನ್ನು ಹರಡಲಾಗುತ್ತಿದೆ ಎಂದು ಅವರು ಅರ್ಜಿಯಲ್ಲಿ ಹೇಳಿದ್ದರು.ಬೆಂಗಳೂರಿನ ಧರ್ಡ್ ಐ ಯೂಟ್ಯೂಬ್ ಚಾನಲ್ ಕೂಡ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಿತ್ತು.






