ಸಾಂಸ್ಕೃತಿಕ
ನಟಿ ಅರುಂಧತಿ ನಾಯರ್ ಗೆ ಅಪಘಾತ; ಜೀವನ್ಮರಣ ಸ್ಥಿತಿ.!

Views: 167
ಬೈಕ್ ಅಪಘಾತದಲ್ಲಿ ನಟಿಯೊಬ್ಬಳು ಗಂಭೀರವಾಗಿ ಗಾಯಗೊಂಡು ಇದೀಗ ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಕೇರಳದಲ್ಲಿ ನಡೆದಿದೆ.
ಮಲೆಯಾಳಂ ಹಾಗೂ ತಮಿಳು ಚಿತ್ರಗಳಲ್ಲಿ ನಟಿಸಿರುವ ನಟಿ ಅರುಂಧತಿ ನಾಯರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅರುಂಧತಿ ತನ್ನ ಸಹೋದರನೊಂದಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಅಪಘಾತಕ್ಕೀಡಾಗಿದ್ದಾಳೆ. ಯೂಟ್ಯೂಬ್ ಚಾನೆಲ್ ಒಂದಕ್ಕೆ ಸಂದರ್ಶನ ನೀಡಿ ಹಿಂತಿರುಗುತ್ತಿದ್ದಳು. ಇಬ್ಬರಿಗೆ ಡಿಕ್ಕಿ ಹೊಡೆದ ವಾಹನ ನಿಲ್ಲಲಿಲ್ಲ. ನಟಿ ಮತ್ತು ಆಕೆಯ ಸಹೋದರ ಸುಮಾರು ಒಂದು ಗಂಟೆ ಅಪಘಾತದಿಂದಾಗಿ ರಸ್ತೆಯ ಮೇಲೆ ಬಿದ್ದಿದ್ದರು ಎಂದು ಹೇಳಲಾಗಿದೆ.
ಅಪಘಾತದಲ್ಲಿ ನಟಿ ಅರುಂಧತಿ ಗಂಭೀರವಾಗಿ ಗಾಯಗೊಂಡಿದ್ದು, ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ಸಹೋದರಿ ಆರತಿ ನಾಯರ್ ತಿಳಿಸಿದ್ದಾರೆ. ತಿರುವನಂತಪುರದ ಅನಂತಪುರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸಹಾಯದಲ್ಲಿ ಇದ್ದಾರೆ ಎಂದು ಹೇಳಿದ್ದಾರೆ.