ರಾಜಕೀಯ

ನಟ ಶಿವರಾಜ್‌ ಕುಮಾರ್ ಆಸ್ಪತ್ರೆಗೆ ದಾಖಲು; ವೈದ್ಯರು ಹೇಳಿದ್ದೇನು?

Views: 324

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ನಿನ್ನೆ ಮಧ್ಯಾಹ್ನ ಅನಾರೋಗ್ಯದಿಂದ ನಗರದ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದರು. ಶಿವರಾಜ್‌ಕುಮಾರ್ ಅವರ ಆರೋಗ್ಯ ತಪಾಸಣೆ ಮಾಡಿರುವ ವೈದ್ಯರು ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.

ನಟ ಶಿವರಾಜ್‌ ಕುಮಾರ್ ಅವರಿಗೆ ಕಿಡ್ನಿ ಸ್ಟೋನ್ ಆಗಿತ್ತು. ಹೀಗಾಗಿ ಆಸ್ಪತ್ರೆಗೆ ಆಗಮಿಸಿದ್ದಾರೆ. ಶಿವಣ್ಣನ ಆರೋಗ್ಯ ಚೆಕ್‌ ಮಾಡಿದ ವೈದ್ಯರು ಯಾವುದೇ ಸಮಸ್ಯೆ ಇಲ್ಲ. ಇಂದು ಮಧ್ಯಾಹ್ನದ ವೇಳೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗು ಸಾಧ್ಯತೆ ಇದೆ.

ಇತ್ತೀಚೆಗೆ ಶಿವರಾಜ್‌ ಕುಮಾರ್ ಅವರು ಶಿವಮೊಗ್ಗ ಲೋಕಸಭಾ ಚುನಾವಣಾ ಕಣದಲ್ಲಿ ಅಬ್ಬರದ ಪ್ರಚಾರ ಮಾಡಿದ್ದರು. ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ಬಿರು ಬಿಸಿಲಿನಲ್ಲೂ ಕಾಂಗ್ರೆಸ್ ಪರ ಮತಯಾಚನೆ ಮಾಡಿದ್ದರು. ಚುನಾವಣಾ ಪ್ರಚಾರದ ಜೊತೆಗೆ ಶಿವಣ್ಣ ಭೈರತಿ ರಣಗಲ್ ಸಿನಿಮಾದ ಶೂಟಿಂಗ್‌ನಲ್ಲೂ ಭಾಗಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಬಿಸಿಲಿಗೆ ಬಸವಳಿದು ಶಿವರಾಜ್‌ಕುಮಾರ್ ಅನಾರೋಗ್ಯಗೊಂಡಿದ್ದಾರೆ ಎನ್ನಲಾಗಿತ್ತು.

ಶಿವರಾಜ್ ಕುಮಾರ್ ಅನಾರೋಗ್ಯದ ಹಿನ್ನೆಲೆಯಲ್ಲಿ ನಿನ್ನೆ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದಿದ್ದಾರೆ. ಇಂದು ಮಧ್ಯಾಹ್ನ ಆಸ್ಪತ್ರೆಯಿಂದ ಶಿವಣ್ಣ ಅವರನ್ನು ಡಿಸ್ಚಾರ್ಜ್ ಮಾಡಲಾಗುತ್ತಾ ಇದ್ದು, ವಿಶ್ರಾಂತಿ ಪಡೆದ ನಂತರ ಚುನಾವಣೆ ಪ್ರಚಾರಕ್ಕೆ ಮತ್ತೆ ತೆರಳುವ ಸಾಧ್ಯತೆ ಇದೆ.

Related Articles

Back to top button