ರಾಜಕೀಯ
ನಟ ಶಿವರಾಜ್ ಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

Views: 88
ಬೆಂಗಳೂರು: ನಟ ಶಿವರಾಜ್ ಕುಮಾರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿರುವುದರಿಂದ ಅವರು ಅಭಿನಯಿಸಿರುವ ಚಿತ್ರಗಳು ಮತ್ತು ಅವರು ಇರುವ ಜಾಹಿರಾತುಗಳ ಮೇಲೆ ನಿರ್ಬಂಧ ವಿಧಿಸಬೇಕು ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಬಿಜೆಪಿ ಒಬಿಸಿ ಮೋರ್ಚಾ ದೂರು ನೀಡಿದೆ.
ಲೋಕಸಭಾ ಚುನಾವಣೆ ಮುಗಿಯುವ ತನಕ ಶಿವರಾಜ್ಕುಮಾರ್ ಅವರ ಸಿನಿಮಾ, ಜಾಹೀರಾತು, ಬಿಲ್ಬೋರ್ಡ್ಗಳನ್ನು ಪ್ರದರ್ಶನ ಮಾಡದಂತೆ ಚಿತ್ರಮಂದಿರ, ಟಿವಿ ಚಾನೆಲ್, ಸೋಶಿಯಲ್ ಮೀಡಿಯಾ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಆದೇಶ ನೀಡಬೇಕು ಎಂದು ಚುನಾವಣಾ ಆಯೋಗಕ್ಕೆ ಎಂದು ಬಿಜೆಪಿ ಮನವಿ ಮಾಡಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರ ಪ್ರಚಾರದಲ್ಲಿದ್ದಾರೆ.