ನನ್ನ ರಾಜಕೀಯ ಏನೇ ಆದ್ರೂ ಮಂಡ್ಯದಿಂದ ಮಾತ್ರ, ಮಂಡ್ಯ ಬಿಟ್ಟುಕೊಡೋ ಮಾತೇ ಇಲ್ಲ..!:ಸುಮಲತಾ ಖಡಕ್ ಹೇಳಿಕೆ

Views: 59
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಚಿಕಿತ್ಸೆಗಾಗಿ ಚೆನ್ನೈ ತೆರಳು ಮೊದಲ ಮಂಡ್ಯ, ಹಾಸನ ಹಾಗೂ ಕೋಲಾರದಿಂದ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಮಾರ್ಚ್ 25 ರಂದು ಬಂದು ಅಭ್ಯರ್ಥಿಗಳನ್ನು ಘೋಷಣೆ ಮಾಡುವುದಾಗಿ ಕುಮಾರಸ್ವಾಮಿ ಹೇಳಿಕೆ ನೀಡಿದ ಬೆನ್ನಲ್ಲೇ ಮಂಡ್ಯ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರು, ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್ ನಾಯಕರ ಜೊತೆಗೆ ಮಂಡ್ಯ ಟಿಕೆಟ್ ವಿಚಾರವಾಗಿ ಮಾತುಕತೆ ನಡೆಸಿದ ಬಳಿಕ ಬೆಂಗಳೂರಿನ ಮರಳಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸಂಸದೆ ಸುಮಲತಾ ಅಂಬರೀಶ್ ಮಾತನಾಡಿ, ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಇನ್ನೂ ಅಂತಿಮಗೊಳಿಸಿಲ್ಲ. ದೆಹಲಿಯಲ್ಲಿ ವರಿಷ್ಠರೊಂದಿಗೆ ಮಾತಾಡುವಾಗ ಮಂಡ್ಯ ಕ್ಷೇತ್ರಕ್ಕೆ ಅವರು ಇನ್ನೂ ಅಭ್ಯರ್ಥಿಯನ್ನು ಅಂತಿಮಗೊಳಿಸದಿರುವುದು ಗೊತ್ತಾಯಿತು, ಕ್ಷೇತ್ರದ ಬಗ್ಗೆ ಎಲ್ಲ ಮಾಹಿತಿಯನ್ನು ಅವರಿಗೆ ತಿಳಿಸಿದ್ದೇನೆ ಎಂದು ಸುಮಲತಾ ಹೇಳಿದ್ದಾರೆ.
ಮಂಡ್ಯ ಟಿಕೆಟ್ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಎಲ್ಲ ಅಂಶಗಳನ್ನು ಗಮನಿಸಿ ಮಾರ್ಚ್ 22 ರಂದು ಹೆಸರನ್ನು ಪ್ರಕಟಿಸಲಿದ್ದಾರೆ, ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಹ ಅದನ್ನೇ ಹೇಳಿದ್ದಾರೆ ಎಂದು ಸುಮಲತಾ ಹೇಳಿದರು.
ಚಿಕ್ಕಬಳ್ಳಾಪುದಿಂದ ಟಿಕೆಟ್ ಆಫರ್ ನೀಡಲಾಗಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸುಮಲತಾ ಅವರು, ನನಗೆ ಚಿಕ್ಕಬಳ್ಳಾಪುರ ಕ್ಷೇತ್ರ ನೀಡುವಂತೆ ಬೇರೆಯವರು ವರಿಷ್ಠರ ಮುಂದೆ ಪ್ರಸ್ತಾಪ ಮಾಡುತ್ತಿದ್ದಾರೆಯೇ ಹೊರತು ಅವರೇನೂ ತನ್ನ ಜೊತೆ ಅದರ ಬಗ್ಗೆ ಚರ್ಚೆ ಮಾಡಲಿಲ್ಲ, ಬೆಂಗಳೂರು ಉತ್ತರ ಕ್ಷೇತ್ರವನ್ನೇ ನಾನು ನಿರಾಕರಿಸಿದ್ದೇನೆ. ಇನ್ನೂ ಕ್ಕಬಳ್ಳಾಪುರ ಒಪ್ಪಿಕೊಳ್ಳುವುದು ಸಾಧ್ಯವೇ? ತಾನೇನಿದ್ದರೂ ಮಂಡ್ಯದಿಂದಲೇ ಸ್ಪರ್ಧಿಸುವುದು. ನನ್ನ ರಾಜಕೀಯ ಏನೇ ಆದ್ರೂ ಮಂಡ್ಯದಿಂದ ಮಾತ್ರ ಎಂದು ಸುಮಲತಾ ಅವರು ಅಚ್ಚರಿ ಹೇಳಿಕೆ ನೀಡಿರುವುದು, ಹೆಚ್ ಡಿ ಕುಮಾರಸ್ವಾಮಿಯವರ ತಲೆಬಿಸಿಯನ್ನು ಮತ್ತಷ್ಟು ಹೆಚ್ಚಿಸುವಂತೆ ಮಾಡಿದೆ.