ರಾಜಕೀಯ

ನರೇಂದ್ರ ಮೋದಿ ಉತ್ತರಾಧಿಕಾರಿ ಸ್ಥಾನಕ್ಕೆ ಸೂಕ್ತ ನಾಯಕ ಯಾರು? ‘ಇಂಡಿಯಾ ಟುಡೆ’ ಸಮೀಕ್ಷೆಗೆ ಜನರ ಉತ್ತರ ಇಲ್ಲಿದೆ..

Views: 183

ಈಗಿನ ಸನ್ನಿವೇಶದಲ್ಲಿ ಲೋಕಸಭೆ ಚುನಾವಣೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿನ ಎನ್‌ಡಿಎ ಮೈತ್ರಿಕೂಟ ಮತ್ತೊಮ್ಮೆ ಸರ್ಕಾರ ರಚಿಸುವುದು ಖಚಿತ ಎಂದು ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ. ನರೇಂದ್ರ ಮೋದಿ ಅವರ ಉತ್ತರಾಧಿಕಾರಿಯ ಸ್ಥಾನಕ್ಕೆ ಸೂಕ್ತ ನಾಯಕ ಯಾರು ಎಂಬ ಪ್ರಶ್ನೆಗೆ ಜನರ ಉತ್ತರ ಇಲ್ಲಿದೆ

ಈಗಿನ ಸನ್ನಿವೇಶದಲ್ಲಿ ಲೋಕಸಭೆ ಚುನಾವಣೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿನ ಎನ್‌ಡಿಎ ಮೈತ್ರಿಕೂಟ ಮತ್ತೊಮ್ಮೆ ಸರ್ಕಾರ ರಚಿಸುವುದು ಖಚಿತ ಎಂದು ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ. ನರೇಂದ್ರ ಮೋದಿ ಅವರ ಉತ್ತರಾಧಿಕಾರಿಯ ಸ್ಥಾನಕ್ಕೆ ಸೂಕ್ತ ನಾಯಕ ಯಾರು ಎಂಬ ಪ್ರಶ್ನೆಗೆ ಜನರ ಉತ್ತರ ಇಲ್ಲಿದೆ.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಬಹುಮತ ಪಡೆದ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ‘ಇಂಡಿಯಾ ಟುಡೆ’ ವಾಹಿನಿಯ ‘ಮೂಡ್ ಆಫ್ ದಿ ನೇಷನ್’ ಸಮೀಕ್ಷೆ ಪ್ರಕಾರ ಎನ್‌ಡಿಎ ಮೈತ್ರಿಕೂಟವು 335 ಸ್ಥಾನಗಳನ್ನು ಪಡೆದುಕೊಳ್ಳಲಿದೆ. ಈ ಮೂಲಕ ನರೇಂದ್ರ ಮೋದಿ 3.0 ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ.

2014 ಮತ್ತು 2019ರ ಲೋಕಸಭೆ ಚುನಾವಣೆಗಳಲ್ಲಿ ಪ್ರಧಾನಿ ಮೋದಿ ಅವರ ಹೆಸರು ಹಾಗೂ ವರ್ಚಸ್ಸು ಬಿಜೆಪಿ ಪರವಾಗಿ ಕೆಲಸ ಮಾಡಿತ್ತು. ಅದು 2024ರಲ್ಲಿಯೂ ಮುಂದುವರಿಯಲಿದೆ. ಸತತ ಮೂರನೇ ಅವಧಿಗೆ ಮೋದಿ ಅವರನ್ನು ಆಯ್ಕೆ ಮಾಡಲು ಮತದಾರರು ಬಯಸಿದ್ದಾರೆ ಎಂದು ಸಮೀಕ್ಷೆ ಹೇಳುತ್ತಿದೆ.

73 ವರ್ಷ ವಯಸ್ಸಿನ ಮೋದಿ ಅವರು ಪೂರ್ಣಾವಧಿ ಹುದ್ದೆಯಲ್ಲಿ ಮುಂದುವರಿಯುತ್ತಾರೆಯೇ ಅಥವಾ ಅದಕ್ಕೂ ಮೊದಲೇ ಹುದ್ದೆಯಿಂದ ನಿರ್ಗಮಿಸುತ್ತಾರೆಯೇ ಎನ್ನುವುದು ಕುತೂಹಲ ಮೂಡಿಸಿರುವ ಸಂಗತಿ. 75 ವರ್ಷ ದಾಟಿದ ನಾಯಕರಿಗೆ ಉನ್ನತ ಹುದ್ದೆ ಅಥವಾ ಸಚಿವ ಸ್ಥಾನ ನೀಡಬಾರದು ಎಂಬ ನಿಯಮವನ್ನು ಬಿಜೆಪಿ ಅಳವಡಿಸಿಕೊಂಡಿದೆ. ಇದೇ ಕಾರಣಕ್ಕೆ ಅನೇಕ ಹಿರಿಯ ನಾಯಕರಿಗೆ ಟಿಕೆಟ್ ಕೂಡ ನೀಡಿರಲಿಲ್ಲ. ಇದು ಪ್ರಧಾನಿ ಮೋದಿ ಅವರಿಗೂ ಅನ್ವಯವಾಗಲಿದೆಯೇ ಅಥವಾ ಅವರಿಗೆ ವಿನಾಯಿತಿ ಇರಲಿದೆಯೇ ಎನ್ನುವುದನ್ನು ಕಾದು ನೋಡಬೇಕು.

ಮೋದಿ ಅವರು ಈ ಅವಧಿ ಪೂರ್ಣಗೊಳಿಸುವ ಮುನ್ನವೇ ಹುದ್ದೆ ತ್ಯಜಿಸಿದರೆ ಅಥವಾ ಮುಂದಿನ ಚುನಾವಣೆಯ ವೇಳೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ಬದಲಾಗುವುದಾದರೆ ಅದಕ್ಕೆ ಯಾರು ಸೂಕ್ತ ವ್ಯಕ್ತಿ ಎಂಬ ಪ್ರಶ್ನೆಗೆ ಸಮೀಕ್ಷೆಯಲ್ಲಿ ವಿಭಿನ್ನ ಆಯ್ಕೆಗಳು ಬಂದಿವೆ.

ಸಮೀಕ್ಷೆ ಪ್ರಕಾರ ಹೆಚ್ಚಿನ ಜನರು ಹಾಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಆಯ್ಕೆ ಮಾಡಿದ್ದಾರೆ. ನಂತರದ ಸ್ಥಾನ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿದ್ದಾರೆ. ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಹೆಸರು ಕೂಡ ಚಾಲ್ತಿಯಲ್ಲಿದೆ.

ಮೂಡ್ ಆಫ್ ದಿ ನೇಷನ್ ಸಮೀಕ್ಷೆಯು ಎಲ್ಲಾ ಲೋಕಸಭೆ ಕ್ಷೇತ್ರಗಳಲ್ಲಿನ 35,801 ಮಂದಿಯ ಅಭಿಪ್ರಾಯದ ಆಧಾರದಲ್ಲಿ ನಡೆದಿದೆ. 2023ರ ಡಿಸೆಂಬರ್ 15ರಿಂದ 2024ರ ಜನವರಿ 28ರ ಅವಧಿ ನಡುವೆ ಈ ಸಮೀಕ್ಷೆ ನಡೆಸಲಾಗಿದೆ

ಪ್ರಧಾನಿ ಮೋದಿ ಅವರಿಗೆ ಸೂಕ್ತ ಉತ್ತರಾಧಿಕಾರಿ ಅಮಿತ್ ಶಾ ಎಂದು ಅನೇಕರು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಶೇ 29ರಷ್ಟು ಮಂದಿ ಬಿಜೆಪಿಯ ಚಾಣಕ್ಯ ಎಂದೇ ಹೆಸರಾದ ಅಮಿತ್ ಶಾ ಹೆಸರನ್ನು ಅನುಮೋದಿಸಿದ್ದಾರೆ. ಇನ್ನು ಶೇ 25ರಷ್ಟು ಮಂದಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಪ್ರಧಾನಿ ಸ್ಥಾನದಲ್ಲಿ ನೋಡಲು ಬಯಸಿದ್ದಾರೆ. ಸಚಿವ ನಿತಿನ್ ಗಡ್ಕರಿ ಅವರನ್ನು ಶೇ 16ರಷ್ಟು ಮಂದಿ ಆಯ್ಕೆ ಮಾಡಿದ್ದಾರೆ.

Related Articles

Back to top button