ನರ್ಸ್ ಮೇಲೆ ಬಿದ್ದ ಕೇಬಲ್ ವೈರ್; ಸ್ಥಳದಲ್ಲೇ ಮಹಿಳೆ ದಾರುಣ ಸಾವು!

Views: 174
ತುಮಕೂರು: ಬೈಕ್ನಲ್ಲಿ ಹೋಗುತ್ತಿದ್ದಾಗ ಕೇಬಲ್ ವೈರ್ಗೆ ವಿದ್ಯುತ್ ತಂತಿ ತಗುಲಿ ನರ್ಸ್ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಕುಣಿಗಲ್ ತಾಲೂಕಿನ ಇಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ ಬಾಯಿ ಜಾದವ್ (36) ಮೃತಪಟ್ಟ ಯುವತಿ
ಮೃತ ನರ್ಸ್ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಚಿಂಚಲಕಟ್ಟೆ ಮೂಲದ ನಿವಾಸಿ. ಕುಣಿಗಲ್ ತಾಲೂಕಿನ ಇಪ್ಪಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ರು. ಹೀಗಾಗಿ ಲಕ್ಷ್ಮೀಬಾಯಿ ಕುಣಿಗಲ್ ಪಟ್ಟಣದಲ್ಲಿ ವಾಸವಿದ್ದರು. ಕೆಲಸ ಮುಗಿಸಿ ಇಪ್ಪಾಡಿಯಿಂದ ಕುಣಿಗಲ್ ಪಟ್ಟಣಕ್ಕೆ ಬೈಕ್ನಲ್ಲಿ ಹಾದುಹೋಗುತ್ತಿದ್ದಾಗ ಕೇಬಲ್ ವೈರ್ಗೆ ವಿದ್ಯುತ್ ತಂತಿ ತಗುಲಿ ಲಕ್ಷ್ಮೀಬಾಯಿ ಮೇಲೆ ಬಿದ್ದಿದೆ.
ಕೇಬಲ್ ವೈರ್ ಮೇಲೆ ಬಿದ್ದ ಪರಿಣಾಮ ಲಕ್ಷ್ಮೀಬಾಯಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಬೈಕ್ ಸವಾರ ಲಕ್ಷ್ಮಣ್ ಎಂಬುವವರಿಗೂ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹವನ್ನು ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಮೃತ ಲಕ್ಷ್ಮೀಬಾಯಿಗೆ ಇತ್ತೀಚೆಗೆ ಮದುವೆ ನಿಶ್ಚಯವಾಗಿತ್ತಂತೆ. ಆದರೆ ಯಮನ ರೂಪದಲ್ಲಿ ಬಂದ ಕೇಬಲ್ ವೈರ್ನಿಂದ ಲಕ್ಷ್ಮೀಬಾಯಿ ಮೃತಪಟ್ಟಿದ್ದಾರೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ