ರಾಜಕೀಯ
ನಳೀನ್ ಕುಮಾರ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ.?

Views: 1
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಇತ್ತೀಚಿಗೆ ವಿಧಾನಸಭಾ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ, ಅವರು ಅಧ್ಯಕ್ಷನಾಗಿ ಎರಡು ವರ್ಷದ ಅವಧಿ ಮುಗಿದು ಚುನಾವಣೆ ಕಾರಣಕ್ಕೆ ಮುಂದುವರಿದಿದ್ದೇನೆ. ಈಗ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.
ನಾನು ಬಿಜೆಪಿಗೆ ಬಂದು 15 ವರ್ಷ ಆಯ್ತು. ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿಯನ್ನು ಒಟ್ಟಿಗೆ ನಡೆಸಿಕೊಂಡು ಹೋಗಿದ್ದೇನೆ ಹೈಕಮಾಂಡ್ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ ಎಂದರು.