ರಾಜಕೀಯ

ನಾನು ಬೇರೆ ಕ್ಷೇತ್ರಗಳಿಗೆ ಹೋಗುವ ಪ್ರಶ್ನೆಯೇ ಇಲ್ಲ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದಲೇ ಸ್ಪರ್ಧೆ: ಶೋಭಾ ಕರಂದ್ಲಾಜೆ

Views: 55

ಉಡುಪಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರ ತಮ್ಮದೇ ಎಂದು ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಹಲವು ಕ್ಷೇತ್ರಗಳಿಂದ ನನ್ನ ಹೆಸರು ಕೇಳಿ ಬರುತ್ತಿದೆ. ಕನಿಷ್ಠ 5-6 ಕ್ಷೇತ್ರಗಳು ನನ್ನ ಹೆಸರನ್ನು ಹೇಳುತ್ತಿವೆ. ಆದರೆ ಉಡುಪಿ-ಚಿಕ್ಕಮಗಳೂರು ನನ್ನ ಕ್ಷೇತ್ರ. ಈ ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದ್ದರು. ನಾನು ಬೇರೆ ಕ್ಷೇತ್ರಗಳಿಗೆ ಹೋಗುವ ಪ್ರಶ್ನೆಯೇ ಇಲ್ಲ. ಆದರೆ ಪಕ್ಷ ಬದಲಾವಣೆ ಬಯಸಿದಲ್ಲಿ ಅದನ್ನು ಪಾಲಿಸಿ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರುತ್ತೇನೆ ಎಂದು ಹೇಳಿದ್ದಾರೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ. ನನ್ನ ಅಭಿವೃದ್ಧಿ ಕಾರ್ಯಗಳ ಆಧಾರದ ಮೇಲೆ ಪ್ರಚಾರಕ್ಕೆ ಹೋಗಲು ನಿರ್ಧರಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ಕಾಂಗ್ರೆಸ್‌ಗೆ ಮರಳಿದ ಜೆಪಿ ಹೆಗಡೆಯವರನ್ನು ಉದ್ದೇಶಿಸಿ ಮಾತನಾಡಿದ ಶೋಭಾ ಕರಂದ್ಲಾಜೆ, ಯಾರು ಕಾಂಗ್ರೆಸ್‌ಗೆ ಮರಳುತ್ತಾರೋ, ಯಾರು ಬಿಜೆಪಿಯಲ್ಲಿ ಇರುತ್ತಾರೋ ಗೊತ್ತಿಲ್ಲ. ಬಿಜೆಪಿಯಿಂದ ಲಾಭ ಪಡೆದು ಹೋದವರು ಅವರೇ ನಷ್ಟ ಅನುಭವಿಸುತ್ತಾರೆ. ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಸುವರ್ಣಾವಕಾಶ ನಮ್ಮ ಮುಂದಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸೋಣ ಎಂದು ಅವರು ಹೇಳಿದ್ದಾರೆ.

 

 

 

Related Articles

Back to top button