“ನಾನು ಯಾವುದೇ ಕಾರಣಕ್ಕೂ ಬಳ್ಳಾರಿಗೆ ಹೋಗಲ್ಲ”..ಹಠ ಹಿಡಿದು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕುಳಿತ ದರ್ಶನ್!

Views: 204
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿರುವ ನಟ ದರ್ಶನ್ ರಾಜಾತಿಥ್ಯ ಪಡೆದುಕೊಂಡು ಮೇಲೆ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಜೈಲಾಧಿಕಾರಿಗಳು ಮಾಡಿದ ಮನವಿ ಮೇರೆಗೆ ಕೋರ್ಟ್ ಪರಪ್ಪನ ಅಗ್ರಹಾರದಿಂದ ಬಳ್ಳಾರಿಗೆ ಶಿಫ್ಟ್ ಮಾಡಲು ಅನುಮತಿ ನೀಡಿದೆ. ಕೋರ್ಟ್ ಅನುಮತಿ ಸಿಗುತ್ತಿದ್ದಂತೆ ಜೈಲಾಧಿಕಾರಿಗಳು ದರ್ಶನ್ ಅವರನ್ನು ಬಳ್ಳಾರಿಗೆ ಶಿಫ್ಟ್ ಮಾಡಲು ಸಿದ್ಧತೆ ನಡೆಸಿದ್ದಾರೆ.
ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡೋದು ಫಿಕ್ಸ್ ಆಗಿದೆ. ಆದರೆ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಹೋಗಲು ನಟ ದರ್ಶನ್ ಒಪ್ಪಿಲ್ಲ. ಜೈಲಾಧಿಕಾರಿಗಳ ಬಳಿ ನಾನು ಹೋಗಲ್ಲ ಅಂತ ಹಠ ಹಿಡಿದಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಇಲ್ಲೇ ನಾನು ಅರಾಮಾಗಿದ್ದೇನೆ. ಅಲ್ಲಿಗೆ ಯಾಕೆ ಹೋಗಬೇಕು ಎಂದು ದರ್ಶನ್ ಹೇಳುತ್ತಿದ್ದಾರಂತೆ. ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಅವರ ಮನವೊಲಿಸಿ ಬಳ್ಳಾರಿಗೆ ಕರೆದುಕೊಂಡು ಹೋಗಲು ಹಿರಿಯ ಅಧಿಕಾರಿಗಳ ಹರಸಾಹಸ ಪಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ನಾನು ಬಳ್ಳಾರಿಗೆ ಹೋಗಲ್ಲ ಅಂತ ದರ್ಶನ್ ಅವರು ಪಟ್ಟು ಹಿಡಿದು ಕೂತಿದ್ದಾರೆ ಎನ್ನಲಾಗಿದೆ.
ಕೋರ್ಟ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಜೈಲಾಧಿಕಾರಿಗಲು ದರ್ಶನ್ ಅವರನ್ನು ಬಳ್ಳಾರಿಗೆ ಕರೆದುಕೊಂಡು ಹೋಗಲು ಪರದಾಡುತ್ತಿದ್ದಾರೆ.