ನಾನು ರಾಜಕೀಯಕ್ಕೆ ಬರುವುದಿಲ್ಲ. ಪತ್ನಿ ಸಂಸದೆಯಾಗಲಿ ಎಂಬ ಆಸೆ..ಶಿವರಾಜ್ ಕುಮಾರ್

Views: 113
ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರು ಶಿವಮೊಗ್ಗದಲ್ಲಿ ರಾಜಕೀಯದ ಕುರಿತು ಮಾತನಾಡಿದ್ದಾರೆ. ನಾನು ರಾಜಕೀಯಕ್ಕೆ ಬರುವುದಿಲ್ಲ. ಪತ್ನಿ ಸಂಸದರಾಗಲಿ ಎಂಬ ಆಸೆ ಇದೆ. ಈ ಮೂಲಕ ಮಹಿಳೆಯರಿಗೆ ಮಾದರಿಯಾಗಲಿ. ಒಬ್ಬ ಪತಿಯಾಗಿ ನಾನು ಗೀತಾಳನ್ನು ಸಪೋರ್ಟ್ ಮಾಡುತ್ತೇನೆ. ಶಿವಮೊಗ್ಗದಲ್ಲಿ ಗೀತಾ ಸಾಕಷ್ಟು ಕೆಲಸ ಮಾಡಿದ್ದಾರೆ. ಆದರೆ ಪ್ರಚಾರದ ಕಡೆಗೆ ಗಮನ ಹರಿಸಿಲ್ಲ. ಕೆಲಸಗಳ ಬಗ್ಗೆ ಜನರೊಂದಿಗೆ ಇದ್ದರೆ ಸಾಕು ಎಂದು ಶಿವರಾಜ್ಕುಮಾರ್ ಅವರು ಹೇಳಿದ್ದಾರೆ.
ಇದೇ ಸಂದರ್ಭ ಮಾತನಾಡಿದ ಶಿವರಾಜ್ಕುಮಾರ್ ಅವರ ಪತ್ನಿ ಶಿವಮೊಗ್ಗದಲ್ಲಿ ಸ್ಪರ್ಧೆ ಬಗ್ಗೆ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಅವಕಾಶ ಸಿಕ್ಕರೆ ಸ್ಪರ್ಧೆ ಮಾಡುತ್ತೇನೆ. ಬಂಗಾರಧಾಮದ ಮೂಲಕ ಈಗಾಗಲೇ ಸಾಮಾಜಿಕ ಕೆಲಸ ಮಾಡುತ್ತಿದ್ದೇನೆ ಎಂದಿದ್ದಾರೆ.
ರಾಜಕೀಯ ಕ್ಷೇತ್ರವನ್ನು ಸೇವಾ ಕ್ಷೇತ್ರವಾಗಿ ಪರಿಗಣಿಸಿದ್ದೇನೆ. ಜಿಲ್ಲೆಯಲ್ಲಿ ನಾನು ಓಡಾಡುತ್ತಿದ್ದೇನೆ ಎಂದು ಹೇಳಿದ್ದಾರೆ
ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹುಟ್ಟು ಹಬ್ಬ ಆಚರಣೆ ಹಿನ್ನಲೆ ನಟ ಶಿವರಾಜ್ ಕುಮಾರ್, ಪತ್ನಿ ಗೀತಾ ಶಿವರಾಜ್ ಕುಮಾರ್ ಮತ್ತಿತರರು ಭಾಗಿಯಾಗಿದ್ದರು. ಆ ಸಂದರ್ಭ ಅವರು ಮಾತನಾಡಿದ್ದಾರೆ. ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಕಾಣಿಸಿಕೊಂಡ ಗೀತಾ ಶಿವರಾಜ್ ಕುಮಾರ್ ಅವರು ರಾಜಕೀಯದ ಬಗ್ಗೆಯೂ ಮಾತನಾಡಿದರು
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನ ಸಂಭವನೀಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಗೀತಾ ಅವರು ಕೂಡಾ ರಾಜಕೀಯ ಸ್ಪರ್ಧೆ ಬಗ್ಗೆ ಮಾತನಾಡಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕೇಂದ್ರದ ನಾಯಕರು ಈಗಾಗಲೇ ಪಟ್ಟಿ ಸಿದ್ದ ಪಡಿಸುತ್ತಿದ್ದಾರೆ. ಜಿಲ್ಲೆಯ ಪ್ರಮುಖರ ಅಭಿಪ್ರಾಯವನ್ನು ಕೇಳಿದ್ದಾರೆ. ಗೀತಾ ಶಿವರಾಜ್ ಕುಮಾರ್ ಸೇರಿದಂತೆ ಅನೇಕರ ಹೆಸರು ಪ್ರಸ್ತಾಪದಲ್ಲಿದೆ. ಗೀತಾ ಸಹ ಜಿಲ್ಲೆಯಲ್ಲಿ ಓಡಾಡುತ್ತಿದ್ದಾರೆ.
ಅವರೂ ಪಕ್ಷದ ಕಾರ್ಯಕರ್ತೆ. ಅಭ್ಯರ್ಥಿ ವಿಷಯದಲ್ಲಿ ಕೇಂದ್ರದ ನಾಯಕರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಈ ಬಾರಿಯ ಚುನಾವಣೆ ನಿರ್ಣಾಯಕವಾಗಲಿದೆ.