ಕರಾವಳಿ

ನಾಪತ್ತೆಯಾಗಿದ್ದ ಚೈತ್ರಾ ಹೆಬ್ಬಾರ್ ಸ್ಕೂಟರ್ ಪತ್ತೆ..! ಅನ್ಯಕೋಮಿನ ಯುವಕನ ಕೈವಾಡ ಶಂಕೆ..

Views: 538

ಮಂಗಳೂರು: ಮಾಡೂರು ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ ಪ್ರಕರಣದ ಹಿಂದೆ ಡ್ರಗ್ಸ್ ಮಾಫಿಯಾ, ಲವ್ ಜಿಹಾದ್ ಶಂಕೆಯನ್ನು ವ್ಯಕ್ತಪಡಿಸಿದ ಹಿಂದೂ‌ ಸಂಘಟನೆ ಮುಖಂಡರು, ಇದೀಗ ಬಂಟ್ವಾಳದ ಅನ್ಯಕೋಮಿನ ಯುವಕನ ಕೈವಾಡ ಆಕೆ ನಾಪತ್ತೆ ಪ್ರಕರಣದ ಹಿಂದೆ ಇದ್ದು, ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

ಪುತ್ತೂರಿನ ಕೂರ್ನಡ್ಕದಲ್ಲಿ ವಾಸವಿದ್ದ ಶಾರೂಕ್ ಶೇಖ್ ಮೂಲತಃ ಬಂಟ್ವಾಳದ ನೇರಳಕಟ್ಟೆಯ ನಿವಾಸಿಯಾಗಿದ್ದಾನೆ.

ಚೈತ್ರಾ ತಂಗಿದ್ದ ಪಿಜಿಗೆ ಬರುತ್ತಿದ್ದ ಶಂಕಿತ ಬರುತ್ತಿದ್ದ. ಚೈತ್ರಾ ಪೋಷಕರಿಗೆ ಮಾಡೂರು ಬಜರಂಗದಳ ಮುಖಂಡರು ಮಾಹಿತಿಯನ್ನೂ ನೀಡಿದ್ದರು ಉಳ್ಳಾಲದ ಮಾಡೂರಿನ ಪಿಜಿಯಿಂದ ಫೆ.17 ರಂದು ನಾಪತ್ತೆಯಾಗಿದ್ದ ಚೈತ್ರಾ ಹೆಬ್ಬಾರ್ ಚಲಾಯಿಸಿದ ಸ್ಕೂಟರ್ ಸುರತ್ಕಲ್ ಬಳಿ ಪತ್ತೆಯಾಗಿದೆ.

ಮಾಡೂರಿನ ಪಿಜಿ ಯಿಂದ ಫೆ.17 ರಂದು ಮುಂಜಾನೆ 9 ಗಂಟೆಗೆ ಚೈತ್ರಾ ಇದೇ ಸ್ಕೂಟರ್‌ನಲ್ಲಿ ತೆರಳಿದ್ದರು. ಬಳಿಕ ನಾಪತ್ತೆಯಾಗಿದ್ದ ಚೈತ್ರಾ ಸುಳಿವು ಸಿಗದೆ ಹಿನ್ನೆಲಯಲ್ಲಿ ಚೈತ್ರಾ ದೊಡ್ಡಪ್ಪ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದರು. ಹಿಂದೂ ಸಂಘಟನೆಗಳೂ ಇದೊಂದು ಲವ್‌ ಜಿಹಾದ್ ಪ್ರಕರಣವೆಂದು ಆರೋಪಿಸಿ ಹೋರಾಟದ ಎಚ್ಚರಿಕೆ ನೀಡಿತ್ತು. ಇದಾದ ಬಳಿಕ ತನಿಖೆ ಚುರುಕುಗೊಳಿಸಿ ಪೊಲೀಸರಿಗೆ ಇದೀಗ ಚೈತ್ರಾಳ ಸ್ಕೂಟರ್ ಪತ್ತೆಯಾಗಿದೆ. ಚೈತ್ರ ಪಿಜಿಯಿಂದ ಹೊರಟ ಬಳಿಕ ಪಂಪ್‌ವೆಲ್ ಬಳಿ ಮೊಬೈಲ್ ಆಫ್ ಮಾಡಿಕೊಂಡಿದ್ದು ಬಳಿಕ ಸುರತ್ಕಲ್‌ಗೆ ಬಂದು ಅಲ್ಲಿ ಎಟಿಎಂನಲ್ಲಿ ಹಣ ಡ್ರಾ ಮಾಡಿದ್ದರು, ಬ್ಯಾಂಕ್ ಖಾತೆಯನ್ನು ಬ್ಲಾಕ್ ಮಾಡಿಸಿರುವ ಪೊಲೀಸರು ಶಂಕಿತ ಯುವಕನ ಬಗ್ಗೆಯೂ ಮಾಹಿತಿ ಕಲೆ ಹಾಕಿದೆ. ಆದರೆ ಆತನ ಮೊಬೈಲ್ ಕೂಡಾ ಸ್ವಿಚ್‌ ಆಫ್ ಆಗಿರುವ ಕಾರಣ ಚೈತ್ರಾ ಆತನ ಜೊತೆಯಲ್ಲಿ ಹೋಗಿರುವ ಬಲವಾದ ಅನುಮಾನ ಮೂಡಿದೆ. ಕೇರಳ ಅಥವಾ ಬೆಂಗಳೂರಿಗೆ ಹೋಗಿರುವ ಸಾದ್ಯತೆ ಹಿನ್ನಲೆಯಲ್ಲಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Related Articles

Back to top button