ಶಿಕ್ಷಣ
ನಾಲ್ಕನೇ ಮಹಡಿಯಿಂದ ಹಾರಿ ಬಿಸಿಎ ವಿದ್ಯಾರ್ಥಿನಿ ಆತ್ಮಹತ್ಯೆ

Views: 71
ಕನ್ನಡ ಕರಾವಳಿ ಸುದ್ದಿ: ಬೆಂಗಳೂರು ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಶುಕ್ರವಾರ ಮಧ್ಯಾಹ್ನ ಕಟ್ಟಡದ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೇರಳ ಮೂಲದ ಲಕ್ಷ್ಮೀ ಮಿತ್ರ (23) ಅವರು ಬಿಸಿಎ ಆರನೇ ಸೆಮಿಸ್ಟರ್ ವಿದ್ಯಾರ್ಥಿನಿ. ಮಹಡಿಯಿಂದ ಬಿದ್ದು ತೀವ್ರವಾಗಿ ಗಾಯಗೊಂಡ ಇವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸೋಲದೇವನಹಳ್ಳಿ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.