ಜನಮನ
ನಾಳೆಯಿಂದ ಭಾರೀ ಮಳೆ ಮುನ್ಸೂಚನೆ: 23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Views: 224
ಕನ್ನಡ ಕರಾವಳಿ ಸುದ್ದಿ: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ (ಮೇ.17) ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಸೇರಿ ರಾಜ್ಯದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ವಿಜಯಪುರ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.