ರಾಜಕೀಯ
ನಾಳೆಯೇ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ

Views: 95
ನವದೆಹಲಿ: ಬಹು ನಿರೀಕ್ಷಿತ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಗೆ ಮುಹೂರ್ತ ನಿಗಧಿಯಾಗಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯುಕ್ತರಿಂದ ಸುದ್ದಿಗೋಷ್ಠಿ ನಡೆಯಲಿದ್ದು, ನಾಳೆಯೇ ಲೋಕಸಭಾ ಚುನಾವಣೆಗೆ ದಿನಾಂಕ ನಿಗಧಿಯಾಗುವ ಸಾಧ್ಯತೆ ಇದೆ.
ದೆಹಲಿಯ ವಿಜ್ಞಾನ್ ಭವನದಲ್ಲಿ ನಾಳೆ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಟಿ ನಡೆಸಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ನೇತೃತ್ವದ ಚುನಾವಣಾ ಆಯೋಗ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡಲಿದೆ ಎಂದು ತಿಳಿದು ಬಂದಿದೆ.