ಇತರೆ
ನಿವೃತ್ತ ಬ್ಯಾಂಕ್ ಮ್ಯಾನೇಜರ್ ಪಾಂಡುರಂಗ ಭಟ್ ರಸ್ತೆ ಅಪಘಾತದಲ್ಲಿ ನಿಧನ

Views: 520
ಕುಂದಾಪುರ: ತಾಲೂಕಿನ ವಕ್ವಾಡಿ ರಸ್ತೆಯ ಪಕ್ಕದ ‘ಮಧುವನ’ ಗೃಹದ ನಿವಾಸಿ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಪಾಂಡುರಂಗ ಭಟ್ (80) ಕುಂಭಾಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕೂಟರ್ ನಲ್ಲಿ ಬರುವಾಗ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ.
ಬ್ಯಾಂಕಿನಲ್ಲಿ ಸೇವೆ ಸಲ್ಲಿಸಿ, ನಿವೃತ್ತಿಯ ನಂತರ ಕುಂದಾಪುರ ದಕ್ಷಿಣ ರೋಟರಿ ಅಧ್ಯಕ್ಷರಾಗಿದ್ದು, ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು.