ಶಿಕ್ಷಣ

ನೀಟ್ ಪ್ರವೇಶ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

Views: 133

ಕನ್ನಡ ಕರಾವಳಿ ಸುದ್ದಿ: ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿದ್ಯಾರ್ಥಿನಿ ಇಂದು ಭಾನುವಾರ ನಡೆಯುವ ಪರೀಕ್ಷೆಗೆ ಹಾಜರಾಗಬೇಕಿತ್ತು, ಆದರೆ ಶನಿವಾರ ಪಾರ್ಶವನಾಥ್ ಏರಿಯಾದಲ್ಲಿರುವ ಮನೆಯ ಕೋಣೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತ ವಿದ್ಯಾರ್ಥಿನಿಯ ಹೆಸರನ್ನು ಬಹಿರಂಗಪಡಿಸಲು ಪೊಲೀಸರು ನಿರಾಕರಿಸಿದ್ದಾರೆ.

ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಾಗ ಕುಟುಂಬಸ್ಥರು ಮನೆಯಲ್ಲಿಯೇ ಇದ್ದರು. ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ ವಿದ್ಯಾರ್ಥಿನಿಯು ಶವವಾಗಿ ಪತ್ತೆಯಾಗಿದ್ದಾಳೆ. ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು, ವಿದ್ಯಾರ್ಥಿನಿಯನ್ನು ಎಂಬಿಎಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ವೈದ್ಯರು ಪರೀಕ್ಷೆ ನಡೆಸಿ, ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಹಲವು ವರ್ಷಗಳಿಂದ ಕೋಟಾದಲ್ಲಿ ತನ್ನ ಪೋಷಕರೊಂದಿಗೆ ವಾಸಿಸುತ್ತಿದ್ದ ವಿದ್ಯಾರ್ಥಿನಿ, ನೀಟ್-ಯುಜಿಗೆ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿದ್ದರು.

 

Related Articles

Back to top button